ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: ಮಾರ್ಚ್‌ 28ಕ್ಕೆ ಕಾಂಗ್ರೆಸ್‌ ಸಭೆ ನಾಳೆ

Published 26 ಮಾರ್ಚ್ 2024, 15:22 IST
Last Updated 26 ಮಾರ್ಚ್ 2024, 15:22 IST
ಅಕ್ಷರ ಗಾತ್ರ

ವಿಜಯಪುರ: ಲೋಕಸಭೆ ಚುನಾವಣೆ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಾರ್ಚ್‌ 28 ಮಧ್ಯಾಹ್ನ 12ಕ್ಕೆ ನಗರದ ರಾಣಿ ಚನ್ನಮ್ಮ ಸಮುದಾಯ ಭವನದಲ್ಲಿ ಸಭೆ ಆಯೋಜಿಸಲಾಗಿದೆ.

ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಶಾಸಕರಾದ ಅಪ್ಪಾಜಿ ನಾಡಗೌಡ, ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕದೊಂಡ, ಅಶೋಕ ಮನಗೂಳಿ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಜಯಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಗೆಲುವಿಗೆ ಕಾರ್ಯತಂತ್ರಗಳನ್ನು ರೂಪಿಸುವ ಚರ್ಚೆ ನಡೆಯಲಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಎಲ್ಲ ಪದಾಧಿಕಾರಿಗಳು, ಮಾಜಿ ಶಾಸಕರು, ಕಳೆದ ವಿಧಾನಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕೆಪಿಸಿಸಿ ಸದಸ್ಯರು, ವಿವಿಧ ಅಂಗ ಘಟಕದ ಪದಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ವಸಂತ ಹೊನಮೊಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT