ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಭಿವೃದ್ಧಿ ಕಾಂಗ್ರೆಸ್‌ ಮೂಲಮಂತ್ರ: ಎಂ.ಬಿ.ಪಾಟೀಲ

Published 2 ಮೇ 2024, 15:40 IST
Last Updated 2 ಮೇ 2024, 15:40 IST
ಅಕ್ಷರ ಗಾತ್ರ

ವಿಜಯಪುರ: ಅಭಿವೃದ್ಧಿ ಕಾಂಗ್ರೆಸ್‌ ಮೂಲಮಂತ್ರ. ಅದು ನಿತ್ಯ ನಿರಂತರವಾಗಿದೆ. ಕೋಮು ಭಾವನೆ ಕೆರಳಿಸುವವರಿಗೆ ತಕ್ಕ ಪಾಠ ಕಲಿಸಲು ಸರ್ವ ಜನಾಂಗದ ಶಾಂತಿಯ ತೋಟದ ಪಣತೊಟ್ಟಿರುವ ಕಾಂಗ್ರೆಸ್ಸನ್ನು ಬೆಂಬಲಿಸಿ ಸರ್ವಾಂಗೀಣ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಕೈಗಾರಿಕೆ ಮೂಲಸೌಲಭ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.

ಬಬಲೇಶ್ವರ ತಾಲ್ಲೂಕಿನ ದೇವರ ಗೆಣ್ಣೂರ ಮತ್ತು ಗುಣದಾಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ ರಾಜು ಆಲಗೂರ ಪರ ಮತಯಾಚಿಸಿ ಅವರು ಮಾತನಾಡಿದರು.

ಸಂಸದ ರಮೇಶ ಜಿಗಜಿಣಗಿ ಅವರಿಗೆ ಅಭಿವೃದ್ಧಿ ಎಂದರೆ ಅಸಡ್ಡೆ ಎಂಬಂತಾಗಿದೆ. ಶಾಸಕ, ಸಚಿವ, ಸಂಸದರಾದವರು ತಮ್ಮ ಅಧಿಕಾರವಧಿಯಲ್ಲಿ ಕನಿಷ್ಠ ಶೇ 80 ರಷ್ಟಾದರೂ ಕೆಲಸ ಮಾಡಬೇಕು. ಆದರೆ, ಶೂನ್ಯ ಅಭಿವೃದ್ಧಿ ಮಾಡಿರುವವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಪ್ರೊ ರಾಜು ಆಲಗೂರ ಕ್ರಿಯಾಶೀಲರಾಗಿದ್ದು, ಬಹುಭಾಷೆ ಬಲ್ಲವರಾಗಿದ್ದಾರೆ. ಇಂಥ ವಿದ್ಯಾವಂತ ಅಭ್ಯರ್ಥಿಯನ್ನು ಆಯ್ಕೆ ಮಾಡಿ ವಿಜಯಪುರ ಜಿಲ್ಲೆಯಲ್ಲಿ ಬಹುದಿನಗಳಿಂದ ನನೆಗುದಿಗೆ ಬಿದ್ದಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಅವಕಾಶ ಮಾಡಿ ಕೊಡಬೇಕು ಎಂದು ಅವರು ಹೇಳಿದರು.

ನರೇಂದ್ರ ಮೋದಿ ಅವರಿಗೆ 10 ವರ್ಷ ಅವಕಾಶ ನೀಡಿದ್ದು ಜನರಿಗೆ ಸಾಕು ಎನಿಸಿದೆ. ಹೀಗಾಗಿ ಜನರಿಗೆ ಈಗ ಕಾಂಗ್ರೆಸ್ ಗ್ಯಾರಂಟಿಗಳ ಮೇಲೆ ಭರವಸೆ ಮೂಡಿದೆ. ಮತದಾರರು ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಿ ಬಿಜೆಪಿಗೆ ತಕ್ಕಪಾಠ ಕಲಿಸಲು ಸನ್ನದ್ಧರಾಗಿದ್ದಾರೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಮುಖಂಡರಾದ ವಿ. ವಿ. ಅರಕೇರಿ, ಡಾ. ಶಂಕ್ರಯ್ಯ ಹಿರೇಮಠ ಮಾತನಾಡಿದರು. ವಿ. ಎಚ್. ಬಿದರಿ, ಅಕ್ಬರ ಬಿದರಿ, ಅರುಣ ಶಿರಬೂರ, ಬಾಬು ಗಡದಾನ, ಆಶಾ ಕಟ್ಟಿಮನಿ, ಶಂಕರಗೌಡ ಪಾಟೀಲ, ಟಿ. ಆರ್. ಪಚ್ಚೆಣ್ಣವರ, ಸುರೇಶಗೌಡ ಪಾಟೀಲ, ಪ್ರಕಾಶ ಸೊನ್ನದ, ಮೈಬೂಬಸಾಬ ರಾಂಪುರ, ಶಿವಪ್ಪ ಮಗಾರಿ, ಸುರೇಶ ಕುರಿ, ಗೋಪಾಲ ಬಾವಿಮನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT