ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಏಳಿಗೆಗೆ ಶ್ರಮಿಸಿ: ಸಂಸದ ರಮೇಶ ಜಿಗಜಿಣಗಿ

ಮಹಾಶಕ್ತಿ ಕೇಂದ್ರ ಕಾರ್ಯಕರ್ತರ ಸಭೆ
Published 5 ಏಪ್ರಿಲ್ 2024, 14:22 IST
Last Updated 5 ಏಪ್ರಿಲ್ 2024, 14:22 IST
ಅಕ್ಷರ ಗಾತ್ರ

ದೇವರಹಿಪ್ಪರಗಿ: ಜಿಲ್ಲೆಯ ಅಭಿವೃದ್ಧಿಗೆ ₹1 ಲಕ್ಷ ಕೋಟಿ ಅನುದಾನ ನೀಡಿದ ಪ್ರಧಾನಿ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗುವುದು ನಿಶ್ಚಿತ. ದೇಶದ ಏಳಿಗೆಗೆ ಶ್ರಮಿಸಿ ಎಂದು ಬಿಜೆಪಿ ಅಭ್ಯರ್ಥಿ, ಸಂಸದ ರಮೇಶ ಜಿಗಜಿಣಗಿ ಹೇಳಿದರು.

ತಾಲ್ಲೂಕಿನ ಮುಳಸಾವಳಗಿಯಲ್ಲಿ ಶುಕ್ರವಾರ ಜರುಗಿದ ಮಹಾಶಕ್ತಿ ಕೇಂದ್ರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಮತ್ತು ಕಳೆದ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಜಿಲ್ಲೆಯಲ್ಲಿ ಈಗ ಏಳು ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಕಾರ್ಯ ಆರಂಭಗೊಂಡಿದೆ. ಆದರೆ ಕಾಂಗ್ರೆಸ್ ಸರ್ಕಾರಗಳು ಮಾತ್ರ ಯಾವುದೇ ಅಭಿವೃದ್ಧಿ ಮಾಡದೇ ಮಕ್ಕಳು, ಸಂಬಂಧಿಗಳಿಗೆ ಅಧಿಕಾರ ದೊರಕಿಸುವುದರಲ್ಲಿ ನಿರತವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿಯಾಗಿದ್ದು ಅತ್ಯಂತ ಸಂತೋಷದ ವಿಷಯ. ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ಮತ್ತೊಮ್ಮೆ ಗೆದ್ದು ಮೋದಿಯವರ ಕೈ ಬಲಪಡಿಸಬೇಕಾಗಿದೆ. ಆದ್ದರಿಂದ ತಾವೆಲ್ಲ ಬಿಜೆಪಿ ಗೆಲುವಿಗಾಗಿ ಶ್ರಮವಹಿಸಿ ಎಂದರು.

ಮಾಜಿ ಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಮಾತನಾಡಿ, ನಮ್ಮ ಸಂಸದರು ಸದ್ದಿಲ್ಲದೇ ಅಭಿವೃದ್ಧಿಯಲ್ಲಿ ನಿರತರಾದವರು ಅವರೆಂದೂ ಪ್ರಚಾರಕ್ಕೆ ಬೀಳಲಿಲ್ಲ. ಜಿಲ್ಲೆಯಲ್ಲಿ ಜೆಜೆಎಂ ಯೋಜನೆಯಡಿ ಕುಡಿಯುವ ನೀರಿಗಾಗಿ ಶ್ರಮಿಸಿದ್ದಾರೆ. ಕಳೆದ ಒಂದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಯಾವುದೇ ಅನುದಾನ ಮಾಡದೇ ಕೇವಲ ಸುಳ್ಳು ಪ್ರಚಾರದಲ್ಲಿ ನಿರತವಾಗಿದೆ. ಆದ್ದರಿಂದ ಈ ಬಾರಿ ಮತ್ತೊಮ್ಮೆ ಬಿಜೆಪಿಗೆ ಮತ ನೀಡಿ ಮೋದಿಯವರ 400ರ ಗುರಿಯನ್ನು ಸಾಕಾರಗೊಳಿಸಿ ಎಂದು ಕರೆ ನೀಡಿದರು.

ವಿಧಾನ ಪರಿಷತ್ ಮಾಜಿಸದಸ್ಯ ಅರುಣ ಶಹಾಪುರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್.ಎಸ್.ಪಾಟೀಲ (ಕೂಚಬಾಳ), ಜಿಲ್ಲಾ ಕಾರ್ಯದರ್ಶಿ ರಮೇಶ ಮಸಬಿನಾಳ, ಸ್ಥಳೀಯ ಕಾರ್ಯಕರ್ತ ಬಸವರಾಜ ಕಲ್ಲೂರ, ಜೆಡಿಎಸ್ ಕಾರ್ಯಕರ್ತ ಸಂಗನಗೌಡ ಬಿರಾದಾರ, ಮಂಡಲ ಅಧ್ಯಕ್ಷ ಅವ್ವಣ್ಣ ಗ್ವಾತಗಿ, ಮಾತನಾಡಿ ಮತ ಯಾಚಿಸಿದರು.

ನಿಂಗರಾಜ ಮಹಾರಾಜ, ಮತಾಬ್ ಮುಜಾವರ್, ಮಡುಗೌಡ ಪಾಟೀಲ, ಈರಣ್ಣಾ ರಾವೂರ, ಪ್ರಭುಗೌಡ ಬಿರಾದಾರ(ಅಸ್ಕಿ), ಶಿಲ್ಪಾ ಕುದರಗೊಂಡ, ಸಿದ್ದು ಬುಳ್ಳಾ, ರಾವುತಪ್ಪ ಮೂಲಿಮನಿ, ಭೀಮನಗೌಡ ಲಚ್ಯಾಣ, ಶ್ರೀಮಂತ ತಳವಾರ, ಚಿದಾನಂದ ಹಿಟ್ನಳ್ಳಿ, ಹುಸೇನ್ ಗೌಂಡಿ, ಪ್ರಕಾಶ ದೊಡಮನಿ, ದಾವುಲಸಾಬ್ ಇನಾಮದಾರ ಇದ್ದರು.

ಮುಳಸಾವಳಗಿ ಗ್ರಾಮದಲ್ಲಿ ಜರುಗಿದ ಮಹಾಶಕ್ತಿ ಕೇಂದ್ರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾಜಿಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಮಾತನಾಡಿದರು
ಮುಳಸಾವಳಗಿ ಗ್ರಾಮದಲ್ಲಿ ಜರುಗಿದ ಮಹಾಶಕ್ತಿ ಕೇಂದ್ರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾಜಿಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಮಾತನಾಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT