ವಿಜಯಪುರ: ಚಡಚಣ ತಾಲ್ಲೂಕಿನ ಧೂಳಖೇಡನಲ್ಲಿರುವ ಆರ್ಟಿಒ ಚೆಕ್ಪೋಸ್ಟ್ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ದಾಖಲೆಯಿಲ್ಲದ ₹2.07 ಲಕ್ಷ ಅಕ್ರಮ ಹಣ ವಶಪಡಿಸಿಕೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರಿಂದ ಸಿಬ್ಬಂದಿ ಹಣ ವಸೂಲಿ ಮಾಡುತ್ತಾರೆ ಎಂಬ ಆರೋಪ ಕೇಳಿ ಬಂದ ಕಾರಣ ಲೋಕಾಯುಕ್ತ ಎಸ್ಪಿ ಮಲ್ಲೇಶ ಟಿ. ನೇತೃತ್ವದಲ್ಲಿ 20ಕ್ಕೂ ಹೆಚ್ಚು ಅಧಿಕಾರಿಗಳ ಎರಡು ಪ್ರತ್ಯೇಕ ತಂಡ ದಾಳಿ ನಡೆಸಿದೆ. ನಿರಂತರ 5 ಗಂಟೆಗಳ ಕಾಲ ಚೆಕ್ ಪೋಸ್ಟ್ನಲ್ಲಿ ದಾಖಲೆಗಳನ್ನು ಪರಿಶೀಲಿಸಿದೆ.

ದಾಖಲಾತಿ ಪರಿಶೀಲಿದ ಅಧಿಕಾರಿಗಳಿಗೆ ದಾಖಲೆಯಿಲ್ಲದ ಒಟ್ಟು ₹ 2,07,700 ನಗದು ಪತ್ತೆಯಾಗಿದೆ. ಚೆಕ್ ಪೋಸ್ಟ್ ಬಳಿ ನಿಂತಿದ್ದ ಬೈಕ್ನಲ್ಲಿ ₹ 1.50 ಲಕ್ಷ ಹಾಗೂ ಆರ್ಟಿಒ ಪೋಸ್ಟ್ನಲ್ಲಿ ₹ 1,92,700 ನಗದು ಪತ್ತೆಯಾಗಿದೆ ಎಂದು ಲೋಕಾಯುಕ್ತ ಎಸ್.ಪಿ ಟಿ. ಮಲ್ಲೇಶ ತಿಳಿಸಿದ್ದಾರೆ.

ಇಬ್ಬರು ಆರ್ಟಿಒ ಅಧಿಕಾರಿಗಳು, 12 ರಿಂದ 14 ಹೋಮ್ಗಾರ್ಡ್ ಸಿಬ್ಬಂದಿಯನ್ನು ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.