ಚಡಚಣ: ಪಟ್ಟಣದ ಪಟ್ಟಣ ಪಂಚಾಯ್ತಿ ಕಚೇರಿ ಮೇಲೆ ಶನಿವಾರ ಲೋಕಾಯುಕ್ತರು ದಾಳಿ ಮಾಡಿ ₹ 7 ಸಾವಿರ ನಗದು ಹಣ ಪಡೆಯುತ್ತಿರುವ ಇಬ್ಬರು ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಮನೆ ಕಟ್ಟಡ ಕಟ್ಟಲು ಕಟ್ಟಡ ರಚನಾ ಪ್ರಮಾಣ ಪಾತ್ರ ನೀಡಲು ವ್ಯಕ್ತಿಯೊಬ್ಬರಿಂದ ₹7 ಸಾವಿರ ನಗದು ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಕಂಪ್ಯೂಟರ್ ಪ್ರೋಗ್ರಾಮರ್ ನಾಗರಾಜ ಕುಲಕರ್ಣಿ ಹಾಗೂ ಎಸ್ ಡಿ ಎ ಶಿವಾನಂದ ಜಂಗಲಗಿ ಇಬ್ಬರು ಸಿಕ್ಕಿಬಿದ್ದಿದ್ದಾರೆ. ಅವರನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ₹ 20 ಸಾವಿರ ಪಡೆದಿದ್ದರು. ಇನ್ನೂ₹ 7 ಏಳು ಸಾವಿರ ಹಣದ ಬೇಡಿಕೆ ಇಟ್ಟಿದ್ದರಿಂದ ದೂರಾದಾರ ಲೋಕಾಯುಕ್ತರಿಗೆ ದೂರು ನೀಡಿದ್ದರು. ದೂರಿನನ್ವಯ ಈ ದಾಳಿ ಮಾಡಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಅರುಣ ನಾಯಕ, ಪೊಲೀಸ್ ಇನ್‌ಸ್ಪೆಕ್ಟರ್ ಆನಂದ ತಕ್ಕಣ್ಣವರ ಹಾಗೂ ಆನಂದ ಡೋಣಿ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.