ಮಂಗಳವಾರ, ನವೆಂಬರ್ 29, 2022
29 °C

ಧೂಳಖೇಡ ಚೆಕ್ ಪೊಸ್ಟ್ ಮೇಲೆ ಲೋಕಾಯುಕ್ತ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ:  ಮಹಾರಾಷ್ಟ್ರ- ಕರ್ನಾಟಕ  ಗಡಿ ಭಾಗದ ಧೂಳಖೇಡ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ
ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಎಸ್ ಪಿ.  ಅನಿತಾ ಹದ್ದನವರ ನೇತೃತ್ವದಲ್ಲಿ ಲೋಕಾಯುಕ್ತ ಡಿಎಸ್ ಪಿ ಅರುಣ ನಾಯಕ, ಪುಷ್ಪ ಲತಾ, ಸಿಪಿಐ ಮಹೇಂದ್ರ ನಾಯಕ, ಆನಂದ ದೋಣಿ, ಆನಂದ ಕಕ್ಕನವರ ಸೇರಿದಂತೆ 20 ಕ್ಕೂ ಹೆಚ್ಚು ಸಿಬ್ಬಂದಿ ಧೂಳಖೇಡ ಚೆಕ್ ಪೋಸ್ಟ್ ಮೇಲೆ ಬೆಳಿಗ್ಗೆ 5 ಗಂಟೆ ಸುಮಾರಿಗೆ ದಾಳಿ ನಡೆಸಿದರು.

ದಾಳಿ ವೇಳೆ 10 ಜನ ಹೋಮ್ ಗಾರ್ಡ್ ಸಿಬ್ಬಂದಿ, ಆರ್ ಟಿಒ ಅಧಿಕಾರಗಳನ್ನು ವಶಕ್ಕೆ  ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ₹ 3 ಲಕ್ಷಕ್ಕೂ ಅಧಿಕ ಹಣ ವಶಪಡಿಸಿಕೊಂಡಿದ್ದಾರೆ. ತಪಾಸಣೆ ಮುಂದುವರಿದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು