ವಿಜಯಪುರ: ಪೆಟ್ರೋಲ್ ಬಂಕ್ ತೆರೆಯಲು ಸ್ಥಳದ ನಕ್ಷೆಗೆ ಅನುಮೋದನೆ ನೀಡಲು ₹15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾಧಿಕಾರಿಗಳ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಸೇರಿದಂತೆ ಇಬ್ಬರು ಶುಕ್ರವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಎಸ್ಡಿಎ ಅರವಿಂದ ಪವಾರ ಹಾಗೂ ಕಂಪ್ಯೂಟರ್ ಆಪರೇಟರ್ ಅಯೂಬ್ ತೊನಶ್ಯಾಳ ಲೋಕಾಯುಕ್ತ ಖೆಡ್ಡಾಕ್ಕೆ ಬಿದ್ದಿದ್ದಾರೆ.

ಪೆಟ್ರೋಲ್ ಬಂಕ್ ತೆರೆಯಲು ಸ್ಥಳದ ನಕ್ಷೆಗೆ ಅನುಮೋದನೆ ನೀಡಲು ಅರ್ಜಿದಾರರೊಬ್ಬರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಾಯುಕ್ತಕ್ಕೆ ಅರ್ಜಿದಾರರು ದೂರು ಸಲ್ಲಿಸಿದ್ದರು. ಅಂತೆಯೇ, ಶುಕ್ರವಾರ ಮಧ್ಯಾಹ್ನ ₹ 15 ಸಾವಿರ ಲಂಚದ ಹಣ ತೆಗೆದುಕೊಳ್ಳುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಬಂಧಿಸಿದ್ದಾರೆ.

ಲೋಕಾಯುಕ್ತ ಎಸ್ಪಿ ಟಿ.ಮಲ್ಲೇಶ, ಡಿಎಸ್ಪಿ ಮಲ್ಲಿಕಾರ್ಜುನ ತುಳಸಿಗೇರಿ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ಗಳಾದ ಆನಂದ ಟಕ್ಕಣ್ಣನವರ, ಆನಂದ ಡೋಣಿ, ನಿಂಗಪ್ಪ ಪೂಜೇರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.