ಬುಧವಾರ, ನವೆಂಬರ್ 25, 2020
24 °C

ಮಧುರಚೆನ್ನ ಕಾವ್ಯ ಪ್ರಶಸ್ತಿಗೆ ಸನದಿ ಅವರ ‘ಹುಲಿಯ ನೆತ್ತಿಗೆ ನೆರಳು’ ಸಂಕಲನ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಹಲಸಂಗಿ ಮಧುರಚೆನ್ನ ಪ್ರತಿಷ್ಠಾನದಿಂದ ಕೊಡಮಾಡುವ 2020ರ ಸಾಲಿನ ‘ಮಧುರಚೆನ್ನ ಕಾವ್ಯ ಪ್ರಶಸ್ತಿ’ಗೆ ಬೆಳಗಾವಿಯ ಕವಿ ನದೀಮ್ ಸನದಿ ಅವರ ‘ಹುಲಿಯ ನೆತ್ತಿಗೆ ನೆರಳು’ ಸಂಕಲನ ಆಯ್ಕೆಯಾಗಿದೆ.

ಪ್ರಶಸ್ತಿಯು ₹ 10 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಮಧುರಚೆನ್ನರ ಜನ್ಮಸ್ಥಳವಾದ ಹಲಸಂಗಿಯಲ್ಲಿ ಡಿಸೆಂಬರ್ 4 ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರತಿಷ್ಠಾನದ ಸಂಚಾಲಕ ಸುಮಿತ್‌ ಮೇತ್ರಿ ತಿಳಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.