ಶನಿವಾರ, ಆಗಸ್ಟ್ 13, 2022
24 °C

ಮಹಾದೇವಿ ತೆಲಗಿಗೆ ‘ಉತ್ತಮ ಶಿಕ್ಷಕಿ’ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಇಲ್ಲಿನ ತಾಜ್‌ ಅಮಿನ್ ದರ್ಗಾದ ಬಾಲಕಿಯರ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮಹಾದೇವಿ ತೆಲಗಿ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿದೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ಕನಸು, ಮನಸಿನಲ್ಲೂ ಪ್ರಶಸ್ತಿಯನ್ನು ನಿರೀಕ್ಷಿಸರಿಲಿಲ್ಲ. ಪ್ರಶಸ್ತಿ ಬಂದಿರುವುದು ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ’ ಎಂದರು.

‘ಶಾಲೆಯಲ್ಲಿ ಮಕ್ಕಳೊಂದಿಗೆ ಒಂದಾಗಿ ಪಾಠ ಹೇಳುತ್ತೇನೆ. ಹೀಗಾಗಿ ಮಕ್ಕಳೆಂದರೆ ನಾನು, ನಾನು ಎಂದರೆ ಮಕ್ಕಳು ಎಂಬಂತಾಗಿದ್ದೇನೆ. ಇದನ್ನು ಗುರುತಿಸಿ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ’ ಎಂದು ಹೇಳಿದರು.

ಮಕ್ಕಳಿಗೆ ಕೇವಲ ಪಾಠ ಮಾತ್ರವಲ್ಲದೇ ಆಟೋಟ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ಮುಂಚೂಣಿಯಲ್ಲಿ ಇರುವಂತೆ ತಯಾರಿ ಮಾಡುತ್ತಿದ್ದೇನೆ ಎಂದರು.

ಇವ ಬಳಿ ಕಲಿತ ಮಕ್ಕಳು ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ, ಬಹುಮಾನ ಪಡೆದುಕೊಂಡಿದ್ದಾರೆ. ಅಲ್ಲದೇ, ಶಾಲಾ ಮಕ್ಕಳಿಂದ ಬೀದಿ ನಾಟಕಗಳನ್ನು ಪ್ರದರ್ಶಿಸಿ ಜನಮೆಚ್ಚುಗೆ ಗಳಿಸಿದ್ದಾರೆ.

ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗಮನ ಸೆಳೆದಿದ್ದಾರೆ.

2007ರಲ್ಲಿ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕಿ ಪ್ರಶಸ್ತಿ, 2018ರಲ್ಲಿ ಬಳ್ಳಾರಿಯಲ್ಲಿ ನಡೆದ ಭಾರತ ಸೇವಾ ದಳದ ಕಾರ್ಯಕ್ರಮದಲ್ಲಿ ಅತ್ತುತ್ತಮ ಶಾಖಾ ನಾಯಕಿ ಪ್ರಶಸ್ತಿ ಲಭಿಸಿದೆ.

ಮಹಾದೇವಿ ತೆಲಗಿ ಅವರ ಸ್ವಂತ ಊರು ‌ಹೂವಿನಹಿಪ್ಪರಗಿ. ನಿಡಗುಂದಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಬಿ.ಎಸ್‌.ಕೋನರೆಡ್ಡಿ ಇವರ ಪತಿಯಾಗಿದ್ದಾರೆ.

ಸೆ.11ರಂದು ಬೆಳಿಗ್ಗೆ 10ಕ್ಕೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು