ವಿಜಯಪುರ: ‘ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 11ನೇ ಘಟಿಕೋತ್ಸವಸೆ.19ರಂದು ಬೆಳಿಗ್ಗೆ 11ಕ್ಕೆ ಜ್ಞಾನಶಕ್ತಿ ಆವರಣದ ಆಡಳಿತ ಭವನದ ಎದುರಿನ ಸಭಾಂಗಣದಲ್ಲಿ ನಡೆಯಲಿದೆ’ ಎಂದು ವಿವಿ ಪ್ರಭಾರ ಕುಲಪತಿ ಪ್ರೊ.ಓಂಕಾರ ಕಾಕಡೆ ಹೇಳಿದರು.
‘ಕೊರೊನಾ ಕಾರಣಕ್ಕಾಗಿ ಈ ಬಾರಿ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪಡೆದ ವಿದ್ಯಾರ್ಥಿನಿಯರು ಹಾಗೂ ಪಿಎಚ್.ಡಿ ಪದವೀಧರರಿಗೆ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಒಟ್ಟು 9,371 ಒಟ್ಟು ವಿದ್ಯಾರ್ಥಿನಿಯರಿಗೆ ಪದವಿ ಪ್ರದಾನ ಮಾಡಲಾಗುತ್ತದೆ. ಮುಖ್ಯ ಅತಿಥಿಗಳಾಗಿ ಭಾಗವಹಿಸುವ ನವದೆಹಲಿಯ ವಿಶ್ವವಿದ್ಯಾಲಯ ಅನುದಾನ ಆಯೋಗ ಸದಸ್ಯ ಪ್ರೊ.ಎಂ.ಕೆ.ಶ್ರೀಧರ್ ಅವರು ಆನ್‌ಲೈನ್‌ನಲ್ಲಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ’ ಎಂದುಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಘಟಿಕೋತ್ಸವವನ್ನು ಅಕ್ಕ ಟಿವಿ ಯುಟ್ಯೂಬ್ ನ್ಯೂಸ್ ಚಾನೆಲ್ ಮತ್ತು ಕೆಎಸ್‍ಡಬ್ಲ್ಯುಯು ಮೀಡಿಯಾ ಸೆಲ್ ಫೇಸ್‍ಬುಕ್ ಲೈವ್ ಮೂಲಕ ವೀಕ್ಷಿಸಬಹುದು’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.