ವಿಜಯಪುರ: ಕಲಬುರಗಿಯ ಪ್ರೊ.ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ ನೀಡುವ 2025ನೇ ಸಾಲಿನ ರಾಜ್ಯಮಟ್ಟದ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ಗೆ ತಾಳಿಕೋಟೆಯ ಎಸ್.ಕೆ. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಸುಜಾತಾ ಚಲವಾದಿ ಭಾಜನರಾಗಿದ್ದಾರೆ.

ಜೂನ್ 5ರಂದು ವಿಜಯಪುರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ₹10 ಸಾವಿರ ನಗದು, ಫಲಪುಷ್ಪ ನೀಡಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರೊ. ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ನಾಗರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.