ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವತಿಗೆ ಚಪ್ಪಲಿಯಿಂದ ಥಳಿಸಿದ ವ್ಯಕ್ತಿ

Published 13 ಫೆಬ್ರುವರಿ 2024, 15:51 IST
Last Updated 13 ಫೆಬ್ರುವರಿ 2024, 15:51 IST
ಅಕ್ಷರ ಗಾತ್ರ

ವಿಜಯಪುರ: ವ್ಯಕ್ತಿಯೊಬ್ಬ ಯುವತಿಗೆ ಚಪ್ಪಲಿಯಲ್ಲಿ ಹೊಡೆದಿರುವ ಘಟನೆ ನಾಗಠಾಣ ಗ್ರಾಮದಲ್ಲಿ ಸೋಮವಾರ ನಡೆದಿದೆ.

ನಾಗಠಾಣದ ಕಂಪ್ಯೂಟರ್‌ ತರಬೇತಿ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಮುಸ್ಲಿಂ ಯುವತಿಯನ್ನು ಚುಡಾಯಿಸಿದ ಕಾರಣಕ್ಕೆ ಶ್ರೀಶೈಲ ಮಸಳಿ ಎಂಬಾತನಿಗೆ ಯುವತಿ ಚಪ್ಪಲಿ ತೋರಿಸಿದ್ದಾಳೆ. ಇದರಿಂದ ಕುಪಿತನಾದ ಶ್ರೀಶೈಲ, ಕಂಪ್ಯೂಟರ್‌ ತರಬೇತಿ ಕೇಂದ್ರದ ಒಳಹೊಕ್ಕು ಯುವತಿಯನ್ನು ಹೊರಗೆ ಎಳೆದುತಂದು ಚಪ್ಪಲಿಯಿಂದ ಹೊಡೆದು, ಕಾಲಿನಿಂದ ಒದ್ದಿದ್ದಾನೆ. ಸಾರ್ವಜನಿಕರು ತಪ್ಪಿಸಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ಈ ಸಂಬಂಧ ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ. ಆರೋಪಿ ವಿರುದ್ಧ ಕ್ರಮಕೈಗೊಳ್ಳುವಂತೆ ಯುವತಿಯ ಪೋಷಕರು ಆಗ್ರಹಿಸಿದ್ದಾರೆ. ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT