ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಸಿಡಿಲು ಬಡಿದು ವ್ಯಕ್ತಿ ಸಾವು

Last Updated 22 ಆಗಸ್ಟ್ 2021, 16:33 IST
ಅಕ್ಷರ ಗಾತ್ರ

ವಿಜಯಪುರ: ತಿಕೋಟಾ ತಾಲ್ಲೂಕಿನ ಬರಟಗಿ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಭಾನುವಾರ ಸಾವಿಗೀಡಾಗಿದ್ದಾರೆ.

ಕಳ್ಳಕವಟಗಿ ಗ್ರಾಮದ ಹಣಮಂತ ಲಕ್ಷ್ಮಣ ಡೊಂಬಾಳೆ (38) ಕೆಲಸಕ್ಕಾಗಿ ಬರಟಗಿ ಗ್ರಾಮಕ್ಕೆ ಕುಟುಂಬ ಸಮೇತ ತೆರಳಿದ್ದರು.

ಭಾನುವಾರ ಸಂಜೆ ಗುಡುಗು, ಮಿಂಚು ಹಾಗೂ ಮಳೆ ಆರಂಭವಾದಾಗ ತೋಟದಲ್ಲಿದ್ದ ಆಕಳನ್ನು ಬಿಚ್ಚಿಕೊಂಡು ಬರಲು ಹೋಗುವಾಗ ಸಿಡಿಲು ಬಡಿದು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.

ಪತ್ನಿ, ಐವರು ಹೆಣ್ಣು, ಇಬ್ಬರು ಗಂಡು ಮಕ್ಕಳು ಹಾಗೂ ತಂದೆ ತಾಯಿ ಇದ್ದಾರೆ ಎಂದು ತಿಕೋಟಾ ತಹಶೀಲ್ದಾರ್ ಸಂತೋಷ ಮ್ಯಾಗೇರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT