ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುದ್ದೇಬಿಹಾಳ: ವಿಚ್ಛೇದನ ಕೇಳಿದವನಿಗೆ ಕೋರ್ಟ್ ಎದುರೇ ಥಳಿತ

Published 21 ಡಿಸೆಂಬರ್ 2023, 23:30 IST
Last Updated 21 ಡಿಸೆಂಬರ್ 2023, 23:30 IST
ಅಕ್ಷರ ಗಾತ್ರ

ಮುದ್ದೇಬಿಹಾಳ (ವಿಜಯಪುರ ಜಿಲ್ಲೆ): ವಿವಾಹ ವಿಚ್ಛೇದನ ಪ್ರಕರಣದ ವಿಚಾರಣೆಗೆ ಬುಧವಾರ ಹಾಜರಾಗಿದ್ದ ವ್ಯಕ್ತಿಯನ್ನು ಆತನ ಪತ್ನಿಯ ಕುಟುಂಬದವರು ಕೋರ್ಟ್ ಗೇಟ್‌ ಎದುರಿನ ವಿದ್ಯುತ್‌ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ.

ಮುದ್ದೇಬಿಹಾಳ ತಾಲ್ಲೂಕಿನ ಬೇರೆ ಬೇರೆ ಗ್ರಾಮದ ಇಬ್ಬರ ನಡುವೆ ವಿವಾಹವಾಗಿತ್ತು. ಆದರೆ, ಮದುವೆ ಆದ  ಕೆಲ ದಿನಗಳಲ್ಲೇ ತನ್ನ ಪತ್ನಿ  ಏಳು ತಿಂಗಳ ಗರ್ಭಿಣಿ ಎಂದು ವ್ಯಕ್ತಿಯು ದೂರಿದರು. ಆಕೆಯನ್ನು ತವರು ಮನೆಗೆ ಕಳುಹಿಸಿ, ವಿವಾಹ ವಿಚ್ಛೇದನಕ್ಕೆ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದರು.

ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯು ಕೋರ್ಟ್‌ಗೆ ಬಂದ ಸಂದರ್ಭದಲ್ಲಿ ಪತ್ನಿ ಸೇರಿದಂತೆ ನಾಲ್ವರು ಅವಾಚ್ಯ ಪದಗಳಿಂದ ನಿಂದಿಸಿದರು. ನಂತರ ಕೋರ್ಟ್ ಮುಂದಿನ ಗೇಟ್ ಬಳಿ ಇದ್ದ ವಿದ್ಯುತ್‌ ಕಂಬಕ್ಕೆ ಕಟ್ಟಿ ಹಗ್ಗದಿಂದ ಥಳಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ’ ಎಂದು ಮುದ್ದೇಬಿಹಾಳ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT