ವಿಜಯಪುರ: ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕಿನ ಹಿಂದಿನ ಹಿರಿಯ ವ್ಯವಸ್ಥಾಪಕ, ರೈಲ್ವೆ ಇಲಾಖೆ ಮೂವರು ನೌಕರರು, ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಹಾಗೂ ವಿವಿಧ ಖಾಸಗಿ ಕಂಪನಿಗಳ ನೌಕರರು, ಲಾರಿ ಚಾಲಕ, ವಾಚ್‌ಮನ್, ಇಲೆಕ್ಟ್ರೀಷಿಯನ್ ಸೇರಿದಂತೆ 15 ಆರೋಪಿಗಳನ್ನು ವಿಜಯಪುರ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.