ವಿಜಯಪುರ: ನಗರ ಸಮೀಪದ ಮನಗೂಳಿ ಬಳಿ ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್ಎಚ್– 50) ಬುಧವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಧಾರುಣವಾಗಿ ಸಾವಿಗೀಡಾಗಿದ್ದಾರೆ.

ಮಹಿಂದ್ರಾ ಸ್ಕಾರ್ಪಿಯೋದಲ್ಲಿ ಇದ್ದ ತೆಲಂಗಾಣದ ಗಡವಾಲದ ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ.ಭಾಸ್ಕರನ್ ಹಾಗೂ ಅವರ ಪತ್ನಿ ಪವಿತ್ರಾ, ಮಗಳು ಜೋಸ್ನಾ, ಮಹೀಂದ್ರಾ ಸ್ಕಾರ್ಪಿಯೋ ಚಾಲಕ ವಿಜಯಪುರ ಜಿಲ್ಲೆಯ ಹೊರ್ತಿಯ ವಿಕಾಸ ಶಿವಪ್ಪ ಮಕನಿ ಹಾಗೂ ವಿಆರ್ಎಲ್ ಬಸ್ ಚಾಲಕ ಕಲಗುಟಗಿ ತಾಂಡಾದ ಬಸವರಾಜ ರಾಠೋಡ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಭಾಸ್ಕರನ್ ಅವರ ಪುತ್ರ ಪ್ರವೀಣತೇಜ ಹಾಗೂ ಲಾರಿ ಚಾಲಕ ಹುಲಜಂತಿಯ ಚನ್ನಬಸು ಸಿದ್ದಪ್ಪ ಮಾಳಿ ಗಾಯಗೊಂಡಿದ್ದು, ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾರಾಷ್ಟ್ರದ ನೋಂದಣಿ (ಎಂ.ಎಚ್.13 ಬಿಎನ್ 8364) ಇರುವ ಮಹೀಂದ್ರಾ ಸ್ಕಾರ್ಪಿಯೋ ಮತ್ತು ವಿಆರ್ಎಲ್ ಬಸ್ (ಎಂ.ಎಚ್.12 ವಿಟಿ 7982) ಹಾಗೂ ಲಾರಿ (ಕೆಎ 22 ಎಎ 3117) ನಡುವೆ ಸರಣಿ ಅಪಘಾತ ಸಂಭವಿಸಿದೆ.

ಸೋಲಾಪುರದತ್ತ ತೆರಳುತ್ತಿದ್ದ ಮಹೀಂದ್ರಾ ಸ್ಕಾರ್ಪಿಯೋ ಆರಂಭದಲ್ಲಿ ಹೆದ್ದಾರಿ ಡಿವೈಡರ್ಗೆ ಡಿಕ್ಕಿ ಹೊಡೆದು ಹಾರಿ, ಮುಂಬೈನಿಂದ ಬಳ್ಳಾರಿಗೆ ತೆರಳುತ್ತಿದ್ದ ವಿಆರ್ಎಲ್ ಬಸ್ಗೆ ಡಿಕ್ಕಿ ಹೊಡೆದಿದೆ. ಬಳಿಕ ಇದೇ ಮಾರ್ಗದಲ್ಲಿ ಬರುತ್ತಿದ್ದ ಲಾರಿಗೂ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕಾರ್ಪಿಯೋದಲ್ಲಿದ್ದ ಐವರು ಹಾಗೂ ಬಸ್ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ವಾಹನಗಳಲ್ಲಿ ಸಿಲುಕಿಕೊಂಡಿರುವ ಶವಗಳನ್ನು ಹೊರತೆಗೆದು ವಿಜಯಪುರ ಜಿಲ್ಲಾಸ್ಪತ್ರೆಗೆ ಸಾಗಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.