ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೊಳಸಂಗಿ: ನ.24ರಂದು ಸಾಮೂಹಿಕ ವಿವಾಹ

Published 23 ನವೆಂಬರ್ 2023, 14:30 IST
Last Updated 23 ನವೆಂಬರ್ 2023, 14:30 IST
ಅಕ್ಷರ ಗಾತ್ರ

ನಿಡಗುಂದಿ: ಗೊಳಸಂಗಿ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಮೂರು ಜೋಡಿಗಳ ಸಾಮೂಹಿಕ ವಿವಾಹ ನ.24ರಂದು ಬೆಳಿಗ್ಗೆ 9 ಗಂಟೆಗೆ ಜರುಗಲಿದೆ.

ಮುತ್ತಗಿಯ ಹಿರೇಮಠದ ವೀರರುದ್ರಮುನಿ ಸ್ವಾಮೀಜಿ, ಯರನಾಳದ ಗುರು ಸಂಗನಬಸವ ಸ್ವಾಮೀಜಿ, ಬಸವನ ಬಾಗೇವಾಡಿಯ ಶಿವಪ್ರಕಾಶ ಸ್ವಾಮೀಜಿ, ಮನಗೂಳಿಯ ಅಭಿನವ ಸಂಗನಬಸವ ಸ್ವಾಮೀಜಿ, ಗೊಳಸಂಗಿ ದೇವಾಂಗಮಠದ ವೇ.ಹುಚ್ಚಯ್ಯ ಸ್ವಾಮೀಜಿ ನೇತೃತ್ವ ಮತ್ತು ಗುರು-ಹಿರಿಯರು, ಆಪ್ತೇಷ್ಟರ ಉಪಸ್ಥಿತಿಯಲ್ಲಿ ಮೆರವಣಿಗೆಯ ಮೂಲಕ ಶ್ರೀ ಬಸವೇಶ್ವರ ಮಂಗಲ ಕಾರ್ಯಾಲಯಕ್ಕೆ ತೆರಳಿ ಸಾಮೂಹಿಕ ವಿವಾಹ ಕಾರ್ಯಕ್ರಮ ನೆರವೇರಲಿದೆ.

ಗೊಳಸಂಗಿಯ ಸರ್ಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಬಸವರಾಜ ಈರಪ್ಪ ಚಲ್ಮಿ ವಿವಾಹ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಇವರು ಈ ಹಿಂದೆಯೂ ಸಾಮೂಹಿಕ ವಿವಾಹ ಏರ್ಪಡಿಸಿದ್ದರು. ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವಂಥ ಸಾಮಾಜಿಕ ಕಾರ್ಯಗಳನ್ನೂ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT