ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಟಿ. ರವಿ ಕ್ಷಮೆಯಾಚನೆಗೆ ಎಂ.ಬಿ.ಪಾಟೀಲ ಆಗ್ರಹ

Last Updated 12 ಸೆಪ್ಟೆಂಬರ್ 2022, 13:55 IST
ಅಕ್ಷರ ಗಾತ್ರ

ವಿಜಯಪುರ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಅವಾಚ್ಯ ಶಬ್ಧಗಳಿಂದ(ಕಚ್ಚೆ ಹರುಕ) ನಿಂದಿಸಿರುವ ಸಿ.ಟಿ.ರವಿ ತಕ್ಷಣ  ಕ್ಷಮೆಯಾಚಿಸಬೇಕು. ಇಲ್ಲವಾದರೆ ಜನ ಪಾಠ ಕಲಿಸಲಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಆಗ್ರಹಿಸಿದ್ದಾರೆ.

ಆಡಳಿತ ಪಕ್ಷದವರ ಭ್ರಷ್ಟಾಚಾರವನ್ನು ಬಯಲಿಗೆಳೆಯುವಾಗ ಲೂಟಿ ಹೊಡೆದಿದ್ದಾರೆ, ದರೋಡೆ ಮಾಡಿದ್ದಾರೆ ಎಂಬ ಪದ ಬಳಸುವುದು ಸಾಮಾನ್ಯ. ಹಿರಿಯ ನಾಯಕ ಸಿದ್ದರಾಮಯ್ಯ ಬಗ್ಗೆ ರವಿ ಈ ರೀತಿ ಪದಪ್ರಯೋಗ ಮಾಡಿರುವುದು ಅವರಿಗೆ ಶೋಭೆ ತರುವುದಿಲ್ಲ. ಇದು ಬಿಜೆಪಿಯವರ ಕೆಟ್ಟ ಸಂಸ್ಕೃತಿ ತೋರಿಸುತ್ತದೆ ಎಂದು ಹೇಳಿದರು.

ಖಾಲಿ ಕುರ್ಚಿ ಎದುರು ಭಾಷಣ:

ದೊಡ್ಡ ಬಳ್ಳಾಪುರದಲ್ಲಿ ನಡೆದ ಬಿಜೆಪಿ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಖಾಲಿ ಕುರ್ಚಿಗಳನ್ನು ಉದ್ದೇಶಿಸಿ ಮಾತನಾಡಿದರು. ಜನರೇ ಇರಲಿಲ್ಲ ಎಂದು ಎಂ.ಬಿ.ಪಾಟೀಲ ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT