ವಿಜಯಪುರ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ಆರಂಭವಾದ ಜಿಟಿಜಿಟಿ ಮಳೆ ಮಂಗಳವಾರ ಮಧ್ಯಾಹ್ನದ ವರೆಗೆ ನಿರಂತರವಾಗಿ ಸುರಿದಿದೆ.
ಮಳೆಯ ಪರಿಣಾಮ ವಿಜಯಪುರ ತಾಲ್ಲೂಕಿನ ಕನ್ನೂರ ಗ್ರಾಮದ ತೋಟದ ಮನೆಯ ಛಾವಣಿ ಮಂಗಳವಾರ ನಸುಕಿನಲ್ಲಿ ಕುಸಿದು ಬಿದ್ದು, ವೃದ್ಧೆ ಶಿವಮ್ಮ ನೂರುಂದಪ್ಪ ಸಾವಳಗಿ(85) ಸಾವಿಗೀಡಾಗಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಗ್ರಾಮಕ್ಕೆ ಭೇಟಿ ನೀಡಿ, ಮೃತರ ಅಂತಿಮ ದರ್ಶನ ಪಡೆದರು. ಬಳಿಕ ಮೃತರ ಕುಟುಂಬದವರಿಗೆ ಸರ್ಕಾರದ ವತಿಯಿಂದ ₹ 5 ಲಕ್ಷ ಪರಿಹಾರ ಧನದ ಚೆಕ್ ವಿತರಿಸಿದರು.
ಶಾಸಕ ವಿಠ್ಠಲ ಕಟಕದೊಂಡ, ವಿಜಯಪುರ ಉಪವಿಭಾಗಾಧಿಕಾರಿ ಬಸಣ್ಣಪ್ಪ ಕಲಶೆಟ್ಟಿ, ವಿಜಯಪುರ ತಹಶೀಲ್ದಾರ್ ಸುರೇಶ ಮುಂಜೆ, ಗ್ರಾಮೀಣ ಸಿಪಿಐ ಸಂಗಮೇಶ ಪಾಲಭಾವಿ, ಕಂದಾಯ ವಿಭಾಗದ ಅಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.