ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈಕ್ಲಿಸ್ಟ್‌ಗೆ ಎಂ.ಬಿ.ಪಾಟೀಲ ಆರ್ಥಿಕ ನೆರವು

Last Updated 19 ಸೆಪ್ಟೆಂಬರ್ 2022, 13:41 IST
ಅಕ್ಷರ ಗಾತ್ರ

ವಿಜಯಪುರ: ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಸೈಕ್ಲಿಂಗ್ ಕ್ರೀಡಾಪಟುವಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರು ಸಹಾಯ ಹಸ್ತ ಚಾಚಿದ್ದಾರೆ.

ಬಬಲೇಶ್ವರ ತಾಲ್ಲೂಕಿನ ಹೆಬ್ಬಾಳಟ್ಟಿ ಗ್ರಾಮದ ಭಾವನಾ ಪಾಟೀಲ ಸೈಕ್ಲಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ತೋರುತ್ತಿದ್ದು, ಸೈಕ್ಲಿಂಗ್ ಕ್ರೀಡಾ ಕೂಟಗಳಲ್ಲಿ ಸ್ವಂತ ಸೈಕಲ್ ಇಲ್ಲದೆ ಆರ್ಥಿಕವಾಗಿ ಸಂಕಷ್ಟದಲ್ಲಿದ್ದರು. ಈ ವಿಷಯ ತಿಳಿದ ಎಂ.ಬಿ.ಪಾಟೀಲ ಅವರು ಭಾವನಾ ಪಾಟೀಲ ಅವರಿಗೆ ₹ 3 ಲಕ್ಷ ಆರ್ಥಿಕ ನೆರವು ನೀಡಿದರು.

ಸದ್ಯಕ್ಕೆ ಭಾವನಾ ಪಾಟೀಲ ಸೈಕ್ಲಿಂಗ್ ತರಬೇತಿಗಾಗಿ ಮೈಸೂರಿನಲ್ಲಿದ್ದಾರೆ.

ಚೆಕ್ ವಿತರಿಸಿ ಮಾತನಾಡಿದ ಎಂ.ಬಿ.ಪಾಟೀಲ, ಯುವತಿ ಸೈಕ್ಲಿಂಗ್ ಕ್ಷೇತ್ರದಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು.

ಭಾವನಾ ತಂದೆ ಮಹಾದೇವ ಪಾಟೀಲ ಮಾತನಾಡಿ, ನಮ್ಮ ಮಗಳಿಗೆ ಸೈಕ್ಲಿಂಗ್ ಎಂದರೆ ತುಂಬಾ ಇಷ್ಟ ಅದಕ್ಕಾಗಿ ಕಠಿಣ ಅಭ್ಯಾಸ ಮಾಡುತ್ತಿದ್ದಾಳೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದ ನಾನಾ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡಿದ್ದಾಳೆ. ಅವಳಿಗೆ ಉತ್ತಮ ಸೈಕಲ್ ಕೊಡಿಸಲು ಸಾಧ್ಯವಾಗದೆ ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ನಮಗೆ ಎಂ. ಬಿ. ಪಾಟೀಲ ಅವರು ದೇವರ ರೂಪದಲ್ಲಿ ಬಂದು ಸಹಾಯ ಮಾಡಿದ್ದಾರೆ. ಅವರಿಗೆ ಋಣಿಯಾಗಿರುತ್ತೇವೆ ಎಂದು ಹೇಳಿದರು.

ಭಾವನಾ ತಾಯಿ ಶ್ರೀದೇವಿ ಪಾಟೀಲ ಮಾತನಾಡಿ, ಮಗಳು ಭಾವನಾಳಿಗೆ ಬಾಲ್ಯದಿಂದಲೇ ಸೈಕ್ಲಿಂಗ್‌ ಎಂದರೆ ಇಷ್ಟ. ಉತ್ತಮ ಸಾಧನೆ ಮಾಡುತ್ತಿದ್ದಾಳೆ.‌‌‌ ಮುಂದಿನ ತಿಂಗಳು ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಸ್ವಂತ ಸೈಕಲ್ ಇರಲಿಲ್ಲ. ಹೊಸ ಸೈಕಲ್ ಕೊಡಿಸಲು ಸಾಧ್ಯವಾಗದೆ ಪರದಾಡುತ್ತಿದ್ದೇವು. ಈ ವಿಷಯ ತಿಳಿದ ಎಂ. ಬಿ. ಪಾಟೀಲ ಅವರು ಆರ್ಥಿಕ ನೆರವು ನೀಡಿದ್ದಾರೆ ಎಂದರು.

ಬಿ. ಎಲ್. ಡಿ. ಇ ಮುಖ್ಯ ಆಡಳಿತಾಧಿಕಾರಿ ಡಾ.ಆರ್.‌ವಿ.‌ಕುಲಕರ್ಣಿ, ನಿರ್ದೇಶಕ ಸಂಗು ಸಜ್ಜನ, ಕ್ರೀಡಾ ನಿರ್ದೇಶಕ ಎಸ್.‌ಎಸ್.‌‌ಕೋರಿ, ಕೈಲಾಸ ಹಿರೇಮಠ, ಅಶೋಕ ಕಾಖಂಡಕಿ, ಶ್ರೀಶೈಲ ತಪಸೆ, ಸಿದ್ದರಾಯ ಪ್ರದಾನಿ, ಈಶ್ವರಪ್ಪ ಬಂಗಾರಿ, ಹೊನಮಲಪ್ಪ ಹಟ್ಟಿ, ಈಶ್ವರ ಅಳ್ಳಗಿ, ಮಲ್ಲು ತುಂಗಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT