ಬುಧವಾರ, ನವೆಂಬರ್ 25, 2020
20 °C

ಔರದಾಕರ್ ವರದಿ ಯಥಾಸ್ಥಿತಿ ಜಾರಿಗೊಳಿಸಿ: ಎಂ.ಬಿ.ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಹಾಗೂ ಅಧಿಕಾರಿಗಳ ವೇತನ  ಹೆಚ್ಚಳ, ಭತ್ಯೆ ಹಾಗೂ ಇತರೆ ಸೌಕರ್ಯಗಳನ್ನು ನೀಡುವ ಔರಾದಕರ್ ವರದಿಯ ಶಿಫಾರಸುಗಳನ್ನು ಯಥಾಸ್ಥಿತಿ ಜಾರಿಗೊಳಿಸಬೇಕು ಎಂದು ಮಾಜಿ ಗೃಹ ಸಚಿವ, ಶಾಸಕ ಎಂ.ಬಿ.ಪಾಟೀಲ ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರ ಈ ವರದಿಯನ್ನು ಭಾಗಶಃ ಮಾತ್ರ ಜಾರಿಗೊಳಿಸಿದ್ದು, ಯಥಾವತ್ತಾಗಿ ವರದಿಯನ್ನು ಜಾರಿಗೆ ತಂದಿಲ್ಲ ಎಂದು ಅವರು ಹೇಳಿದ್ದಾರೆ.

ಹಣಕಾಸು ಇಲಾಖೆ ನಿರ್ಧಾರದಿಂದ ಹೊಸದಾಗಿ ನೇಮಕಗೊಂಡ ಸಿಬ್ಬಂದಿಗೆ ಮಾತ್ರ ಇದು ಅನ್ವಯವಾಗುತ್ತದೆ. ಆದರೆ, ಈಗಾಗಲೇ ಅನೇಕ ವರ್ಷಗಳ ಕಾಲ ಹಗಲಿರುಳು ಸೇವೆ ಕಾರ್ಯನಿರ್ವಹಿಸುತ್ತಿರುವ ರಾಜ್ಯದ ಪೊಲೀಸ್‌ ಸಿಬ್ಬಂದಿಗೆ ಅನ್ವಯವಾಗದೆ ಇರುವುದು ನಿರಾಶಾದಾಯಕ  ಎಂದು ತಿಳಿಸಿದ್ದಾರೆ. 

ಕೊರೊನಾದಂತಹ ಸಂಕಷ್ಟದ ಸಂದರ್ಭದಲ್ಲಿ ತಮ್ಮ ಹಾಗೂ ತಮ್ಮ ಕುಟುಂಬದ ಆರೋಗ್ಯ ಪಣಕ್ಕಿಟ್ಟು, ಕರ್ತವ್ಯ ನಿರ್ವಹಿಸಿರುವ ರಾಜ್ಯದ ಪೊಲೀಸ್ ಇಲಾಖೆಯ ಸಮಸ್ತ ಸಿಬ್ಬಂದಿಗೆ ಔರಾದಕರ್ ವರದಿಯನ್ನು ಯಥಾಸ್ಥಿತಿ ಜಾರಿಗೊಳಿಸುವ ಮೂಲಕ ನ್ಯಾಯ ದೊರಕಿಸಬೇಕಿದೆ ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು