ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಗೆ ಹೋಗಿ ದಾರಿ ತಪ್ಪಿದ ಕುಮಾರಸ್ವಾಮಿ: ಎಂ.ಬಿ.ಪಾಟೀಲ

Published 14 ಏಪ್ರಿಲ್ 2024, 16:14 IST
Last Updated 14 ಏಪ್ರಿಲ್ 2024, 16:14 IST
ಅಕ್ಷರ ಗಾತ್ರ

ವಿಜಯಪುರ: ‘ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು, ದಾರಿ ತಪ್ಪಿದ್ದಾರೆ. ಹೀಗಾಗಿ ಅವರು ಉಳಿದವರೂ ದಾರಿ ತಪ್ಪಿದ್ದಾಗಿ ಹೇಳಿಕೆ ನೀಡಿದ್ದಾರೆ’ ಎಂದು ಸಚಿವ ಎಂ.ಬಿ.ಪಾಟೀಲ ವ್ಯಂಗ್ಯವಾಡಿದರು.

‘ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದರೆ ಏನರ್ಥ? ಕುಮಾರಸ್ವಾಮಿ ಅವರು ತಮ್ಮ ಮಾತಿನ ಒಳಾರ್ಥವನ್ನು ಸ್ಪಷ್ಟಪಡಿಸಬೇಕು’ ಎಂದು ಅವರು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

‘ಗೃಹ ಲಕ್ಷ್ಮಿ ಹಣದಿಂದ ಮಹಿಳೆಯರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಮತ್ತು ಅವರಿಗೆ ಒಳ್ಳೆಯ ಬಟ್ಟೆ ತೊಡಿಸಲು  ಸಾಧ್ಯವಾಗಿದೆ. ಅನ್ನಭಾಗ್ಯದಿಂದ ಮೂರು ಹೊತ್ತು ಊಟ ಸಿಗುತ್ತಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದ ತತ್ತರಿಸಿರುವ ಬಡ, ಮಧ್ಯಮ ಕುಟುಂಬಗಳಿಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಆಸರೆಯಾಗಿವೆ. ಕುಮಾರಸ್ವಾಮಿ ಪ್ರಕಾರ, ಇವೆಲ್ಲವೂ ದಾರಿ ತಪ್ಪಿದಂತೆಯೇ’ ಎಂದು ಅವರು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT