ಸೋಮವಾರ, ಆಗಸ್ಟ್ 2, 2021
26 °C

ಉಪನ್ಯಾಸಕರ ಕೊರತೆ ನಿವಾರಿಸಿ: ಎಂ.ಬಿ.ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಕಳೆದ ಬಾರಿ 14ನೇ ಸ್ಥಾನದಲ್ಲಿದ್ದ ಜಿಲ್ಲೆಯ ಪಿಯುಸಿ ಫಲಿತಾಂಶ ಈ ಬಾರಿ ಕಡೆಯ ಸ್ಥಾನದಲ್ಲಿರುವುದು ತುಂಬಾ ಶೋಚನೀಯ ಎಂದು ಶಾಸಕ ಎಂ.ಬಿ.ಪಾಟೀಲ ಹೇಳಿದ್ದಾರೆ.

‘ಪ್ರಜಾವಾಣಿ’ಯಲ್ಲಿ ಬುಧವಾರ ಪ್ರಕಟವಾಗಿರುವ ‘ಉಪನ್ಯಾಸಕರ ಕೊರತೆ; ಪ್ರಪಾತಕ್ಕೆ ಕುಸಿದ ಫಲಿತಾಂಶ’ ವಿಶೇಷ ವರದಿಯನ್ನು ತಮ್ಮ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಅವರು, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸರ್ಕಾರವು ಎಚ್ಚೆತ್ತುಕೊಂಡು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಉಪನ್ಯಾಸಕರ ನೇಮಕಾತಿ ಆದೇಶ ದೊರಕದೆ; ಕಾಲೇಜುಗಳಲ್ಲಿ ಅರ್ಧದಷ್ಟು ಉಪನ್ಯಾಸಕರ ಕೊರತೆ ಇದೆ. ಸಮರ್ಪಕ ಬೋಧನೆಯಿಲ್ಲದಿರುವುದೇ ಈ ಫಲಿತಾಂಶಕ್ಕೆ ಮುಖ್ಯ ಕಾರಣವಾಗಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.