ವಿಜಯಪುರ: ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವಂತೆ ಆಗ್ರಹಿಸಿ ಹೋರಾಟ ಸಮಿತಿಯಿಂದ ಜಿಲ್ಲಾ ಆಸ್ಪತ್ರೆ ಮುಂದೆ ಶನಿವಾರ ಪ್ರತಿಭಟನೆ ಮಾಡಿ, ಜಿಲ್ಲಾ ಶಸ್ತ್ರ ಚಿಕಿತ್ಸಕರ ಮೂಲಕ ಮುಖ್ಯಮಂತ್ರಿಗೆ ಹೋರಾಟ ಮನವಿ ಸಲ್ಲಿಸಲಾಯಿತು.

ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿ ನಡೆಸುತ್ತಿರುವ ಅನಿದಿಷ್ಟಾವಧಿ ಧರಣಿಯು 24 ದಿನಗಳನ್ನು ಪೂರೈಸಿತು.

ಸರ್ಕಾರಿ ಜಿಲ್ಲಾಸ್ಪತ್ರೆಯು ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಜನರಿಗೆ ಉತ್ತಮ ಆರೋಗ್ಯ ಸೌಲಭ್ಯಗಳನ್ನು ಒದಗಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ಮೂಲಕ ವೈದ್ಯಕೀಯ ಶಿಕ್ಷಣ ಮತ್ತು ಚಿಕಿತ್ಸಾ ಸೇವೆಗಳನ್ನು ಸುಧಾರಿಸುವಂತೆ ಆಗ್ರಹಿಸಿದರು.

ಸಮಿತಿಯ ಸದಸ್ಯ ಭಗವಾನ್ ರೆಡ್ಡಿ ಮಾತನಾಡಿ, ವಿಜಯಪುರ ಜಿಲ್ಲೆಯು ಕೃಷಿ ಮತ್ತು ಗ್ರಾಮೀಣ ಪ್ರದೇಶಗಳಿಗೆ ಪ್ರಸಿದ್ಧವಾಗಿದ್ದು, ಇಲ್ಲಿನ ಜನರಿಗೆ ಸಮರ್ಪಕ ವೈದ್ಯಕೀಯ ಸೌಲಭ್ಯಗಳ ಕೊರತೆಯಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯು ಜಿಲ್ಲೆಯ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಿ, ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನೂ ಸೃಷ್ಟಿಸಲಿದೆ. ಸರ್ಕಾರ ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದರು.

ಮನವಿ ಸ್ವೀಕರಿಸಿದ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಹೋರಾಟಗಾರರ ಬೇಡಿಕೆಯನ್ನು ಸರ್ಕಾರಕ್ಕೆ ಮನವರಿಕೆ ಮಾಡುವುದಾಗಿ ತಿಳಿಸಿದರು.

ಜೊತೆಗೆ ಈ ಮನವಿಯನ್ನು ರಾಜ್ಯ ಆರೋಗ್ಯ ಸಚಿವರಿಗೆ, ಆರೋಗ್ಯ ಇಲಾಖೆ ಆಯುಕ್ತರಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸಿಕೊಡುತ್ತೇನೆ ಎಂದು ಹೇಳಿದರು.

ವಿಜಯಪುರ ನಗರ ಮಹಿಳಾ ಸ್ವ ಸಹಾಯ ಸಂಘಗಳ ಒಕ್ಕೂಟದ ಗೀತಾ ಕಟ್ಟಿ, ಜಯಶ್ರೀ ಚಲುವಾದಿ, ಕಮಲಾ ಮಂಟೂರ, ಭಾರತಿ ಘೋರಪಡೆ, ಸರೋಜಾ ಕಟ್ಟಿಮನಿ, ಲಕ್ಷ್ಮೀ ಸರಸಂಬಿ, ಶಬನಾ ನದಾಫ, ಸಲ್ಮಾ ನದಾಫ, ಶೋಭಾ ವಾಲಿಕಾರ, ಮಹಾದೇವಿ ರಾಥೋಡ, ಸುನಂದಾ ರಾಥೋಡ, ಜವೇದಾ ಸಿಂದಗಿ, ಗೀತಾ ಪಾಟೀಲ ಇದ್ದರು.

ಹೋರಾಟ ಸಮಿತಿಯು ಜಿಲ್ಲೆಯ ಆರೋಗ್ಯ ಸೇವೆಗಳ ಸುಧಾರಣೆಗಾಗಿ ಸ್ಥಾಪಿತವಾಗಿದ್ದು ಮುಂದಿನ ದಿನಗಳಲ್ಲಿ ವಿವಿಧ ಬೇಡಿಕೆಗಳನ್ನು ಬಲಪಡಿಸಲು ಹೆಚ್ಚಿನ ಕಾರ್ಯಕ್ರಮಗಳನ್ನು ಆಯೋಜಿಸಲು ಸಮಿತಿಯು ಯೋಜಿಸಿದೆ
ಭಗವಾನ್ ರೆಡ್ಡಿ ಸಮಿತಿ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.