ವಿಜಯಪುರ: ಸರ್ಕಾರಿ ಆಸ್ಪತ್ರೆ ಆವರಣದಲ್ಲಿ 149 ಎಕರೆ ಜಮೀನು ಇದೆ. ಅಲ್ಲಿ ಸರ್ಕಾರಿ ಆಸ್ಪತ್ರೆ ಉತ್ತಮವಾಗಿದ್ದು, ವೈದ್ಯಕೀಯ ಕಾಲೇಜು ಸ್ಥಾಪಿಸಿದರೆ ಬಡವರ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಸಹಾಯವಾಗುತ್ತದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಅಪ್ಪುಗೌಡ ಪಾಟೀಲ ಮನಗೂಳಿ ಹೇಳಿದರು.

ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿಯಿಂದ ನಗರದಲ್ಲಿ ನಡೆಯುತ್ತಿರುವ ಧರಣಿಗೆ ಬುಧವಾರ ಬೆಂಬಲ ವ್ಯಕ್ತಪಡಿಸಿ ಅವರು ಮಾತನಾಡಿದರು.

ನಮ್ಮ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುವಲ್ಲಿ ನಮ್ಮ ಸಂಸದರು ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ನಮ್ಮ ಜಿಲ್ಲೆಯಲ್ಲಿ ಬಡವರು, ಹಿಂದುಳಿದವರು ಇರುವುದರಿಂದ ಅತಿಹೆಚ್ಚು ಶುಲ್ಕ ಕೊಟ್ಟು ವೈದ್ಯಕೀಯ ಶಿಕ್ಷಣ ಪಡೆಯಲು ಕಷ್ಟವಾಗುತ್ತದೆ. ಎಲ್ಲಾ ಮಕ್ಕಳು ಉಚಿತ ಶಿಕ್ಷಣ ಪಡೆಯುವಂತಾಗಬೇಕು ಎಂದರು.

ಹೋರಾಟಕ್ಕೆ ಜೆಡಿಎಸ್ ಸಂಪೂರ್ಣ ಬೆಂಬಲ ಇದೆ. ಮುಂದಿನ ಹೋರಾಟದಲ್ಲಿ ಪಕ್ಷ ಜೊತೆ ಇರುತ್ತದೆ ಎಂದು ಹೇಳಿದರು.

ಉತ್ತರ ಕರ್ನಾಟಕದ ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷ ಶಂಕರಗೌಡ ಬಿರಾದಾರ ಮಾತನಾಡಿ, ಸರ್ಕಾರ ಅತೀ ಶೀಘ್ರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸರ್ಕಾರ ಜಾಗವಿಲ್ಲದ ಜಿಲ್ಲೆಗಳಿಗೆ ಸಾವಿರಾರು ಕೋಟಿ ಅನುದಾನ ನೀಡಿ ವೈದ್ಯಕೀಯ ಕಾಲೇಜು ಮಾಡಲು ಅವಕಾಶ ಮಾಡಿಕೊಡುತ್ತಾರೆ. ಎಲ್ಲಾ ಸೌಲಭ್ಯಗಳನ್ನು ಹೊಂದಿರುವ ವಿಜಯಪುರ ಜಿಲ್ಲೆಗೆ ದ್ರೋಹ ಬಗೆಯುತ್ತಿದ್ದಾರೆ. ಇದನ್ನು ಸಂಪೂರ್ಣವಾಗಿ ನಾವು ವಿರೋಧಿಸುತ್ತೇವೆ ಎಂದು ಹೇಳಿದರು.

ಮುಖಂಡರಾದ ಸಲೀಂ ನಾಗಠಾಣ, ಮೆಹಬೂಬ ಚೌದರಿ, ಪ್ರಕಾಶ ಸಬರದ, ಕೆ.ಆರ್. ಪೂಜಾರಿ, ಟಿಪ್ಪು ಮೇಲಿನಮನಿ, ರಾಜು ಮೇತ್ರಿ, ಈರಣ್ಣ ಹೂನಳ್ಳಿ, ಹುಸೇನಸಾಬ್, ಈರಪ್ಪ ಮೋಬಿ, ಶಶಿಧರ ನಾಯ್ಕೋಡಿ, ಹೋರಾಟ ಸಮಿತಿ ಸದಸ್ಯರು ಧರಣಿಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.