ಬುಧವಾರ, 12 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಬಾಲಕಿ ಅತ್ಯಾಚಾರ ಆರೋಪಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ

Last Updated 29 ಆಗಸ್ಟ್ 2021, 8:22 IST
ಅಕ್ಷರ ಗಾತ್ರ

ವಿಜಯಪುರ: ಸಿಂದಗಿ ತಾಲ್ಲೂಕಿನ ಗ್ರಾಮವೊಂದರಲ್ಲಿ 13 ವರ್ಷ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ದೇವಿಂದ್ರ ಭೀಮರಾಯ ಸಂಗೋಗಿ(37) ಸಿಂದಗಿ ಪೊಲೀಸ್ ಠಾಣೆಯಲ್ಲಿ ನೇಣು ಹಾಕಿಕೊಂಡು,ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಹಿನ್ನೆಲೆಯಲ್ಲಿ ಆಕೆಯ ತಂದೆ ನೀಡಿದ ದೂರಿನನ್ವಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಭಾನುವಾರ ಬೆಳಿಗ್ಗೆ ಠಾಣೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡಿದ್ದನು. ಇದನ್ನು ಗಮನಿಸಿದ ಪೋಲೀಸರು ಕೂಡಲೇ ವಿಜಯಪುರ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ಅಸುನೀಗಿದ್ದಾನೆ.ಮೃತ ವ್ಯಕ್ತಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಮತ್ತು ತಾಯಿ ಇದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ್, ಅತ್ಯಾಚಾರ ಪ್ರಕರಣದ ಆರೋಪಿ ದೇವಿಂದ್ರ ಸಂಗೋಗಿಯನ್ನು ಸಿಂದಗಿ ಠಾಣೆಯ ಪೊಲೀಸರು ತಡರಾತ್ರಿ ಬಂಧಿಸಿದ್ದರು. ಭಾನುವಾರ ನಸುಕಿನಲ್ಲಿ ಶೌಚಾಲಯಕ್ಕೆ ತೆರಳಿದ್ದ ಆರೋಪಿ ಅಲ್ಲಿ ನೇಣು ಹಾಕಿಕೊಂಡಿದ್ದಾನೆ ಎಂದರು.

ಇದನ್ನು ಗಮನಿಸಿದ ನಮ್ಮ ಸಿಬ್ಬಂದಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಎಂದರು.

ಚಿಕಿತ್ಸೆ ಫಲಕಾರಿಯಾಗದೇ ಆರೋಪಿ ಮೃತಪಟ್ಟಿದ್ದಾನೆ ಎಂದರು.

ಪೊಲೀಸರ‌ ಕಿರುಕುಳದಿಂದ ಆರೋಪಿ ಮೃತಪಟ್ಟಿಲ್ಲ, ನೇಣು ಹಾಕಿಕೊಂಡಿದ್ದ ಕಾರಣ‌ ಆರೋಪಿ ಮೃತಪಟ್ಟಿದ್ದಾನೆ ಎಂದು ಸ್ಪಷ್ಟಪಡಿಸಿದರು. ಪೊಲೀಸ್ ಠಾಣೆಯಲ್ಲಿ ನೇಣು ಹಾಕಿಕೊಂಡು ಸಾವಿಗೀಡಾದ ಇಂಥ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಲಾಗುತ್ತದೆ. ಈ ಘಟನೆ ಕುರಿತು ಸಿಐಡಿ ತನಿಖೆಗೆ ವಹಿಸುವಂತೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದರು.

ಮೃತನ ಪೋಷಕರು ಹಾಗೂ ಸಂಬಂಧಿಕರು ಪೊಲೀಸ್ ಠಾಣೆ ಎದುರಿಗೆ ಪ್ರತಿಭಟನೆ ನಡೆಸಿ, ಆರೋಪಿ ಸಾವಿಗೆ ಪೊಲೀಸರೇ ಕಾರಣ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT