ಭಾನುವಾರ, ಸೆಪ್ಟೆಂಬರ್ 19, 2021
24 °C
ಕ್ಯಾನ್ಸರ್ ಪೀಡಿತ ಮುಸ್ಲಿಂ ಮಹಿಳೆಯರ ₹1 ಲಕ್ಷ ಸಹಾಯಧನ

ಯೋಜನೆ ಬಗ್ಗೆ ತಪ್ಪು ತಿಳಿವಳಿಕೆ: ಸಚಿವೆ ಜೊಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಕ್ಯಾನ್ಸರ್ ಪೀಡಿತ ಮುಸ್ಲಿಂ ಮಹಿಳೆಯರ ಚಿಕಿತ್ಸೆಗಾಗಿ ₹1 ಲಕ್ಷ ಸಹಾಯಧನ ನೀಡುವ ಯೋಜನೆ 2009ರಿಂದ ಜಾರಿಯಲ್ಲಿದೆ. ಇದು ಬಿಜೆಪಿ ಸರ್ಕಾರವಾಗಲಿ ಅಥವಾ ನಾನು ಸಚಿವೆಯಾದ ಬಳಿಕ ಜಾರಿ ಮಾಡಿದ ಯೋಜನೆಯಲ್ಲ. ಯೋಜನೆ ಕುರಿತು ಅನೇಕರು ತಪ್ಪು ತಿಳಿವಳಿಕೆ ಹೊಂದಿದ್ದಾರೆ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದರು.

ನಗರದ ಅದೃಷ್ಟ ಲಕ್ಷ್ಮೀ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಕೊರೊನಾ ವಾರಿಯರ್ಸ್‌ಗಳಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಮುಸ್ಲಿಂ ಮಹಿಳೆಯರಿಗೆ ವಕ್ಫ್‌ ಇಲಾಖೆಯಿಂದ ಸಹಾಯಧನ ನೀಡಲಾಗುತ್ತಿದೆ. ಇದೇ ರೀತಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಇತರೆ ಧರ್ಮದವರಿಗೂ ಸಹಾಯಧನ ಲಭಿಸುತ್ತಿದೆ ಎಂದರು.

ಮುಸ್ಲಿಂ, ಹಿಂದೂ ಎನ್ನುವ ಭೇದಭಾವ ಸರ್ಕಾರ ಮಾಡುತ್ತಿಲ್ಲ. ಹಿಂದೂ ಮಹಿಳೆಯರಿಗೂ ಹಲವು ಯೋಜನೆಗಳ ಮೂಲಕ ಸಹಾಯಧನ ನೀಡಲಾಗುತ್ತಿದೆ ಎಂದು ಹೇಳಿದರು.

ಶಾಸಕ ಯತ್ನಾಳ ಅವರು ಈ ಯೋಜನೆ ಕುರಿತು ಆಕ್ಷೇಪ ವ್ಯಕ್ತಪಡಿಸಿ, ಮುಸ್ಲಿಂ ಮಹಿಳೆಯರಿಗೆ ಸಹಾಯಧನ ನೀಡುವುದನ್ನು ಬಂದ್‌ ಮಾಡಬೇಕು ಎಂದು ಮುಖ್ಯಮಂತ್ರಿ ಮತ್ತು ಸಚಿವರನ್ನು ಆಗ್ರಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು