ಗುರುವಾರ , ಮೇ 13, 2021
40 °C

ಶಾಸಕ ಎ.ಎಸ್. ಪಾಟೀಲ ನಡಹಳ್ಳಿಗೆ ಕೋವಿಡ್-19 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುದ್ದೇಬಿಹಾಳ(ವಿಜಯಪುರ): ಸ್ಥಳೀಯ ಶಾಸಕ ಹಾಗೂ ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಹಾಗೂ ಅವರ ತಂದೆ ಸಂಗನಗೌಡ ಪಾಟೀಲ ಅವರಿಗೆ ಮಂಗಳವಾರ ಕೋವಿಡ್‌ ದೃಢಪಟ್ಟಿದೆ.

ಸೋಂಕಿನ ಲಕ್ಷಣಗಳು ಇಲ್ಲದೇ ಇರುವುದರಿಂದ ಹೋಂ ಐಸೋಲೇಶನ್‌ಗೆ ಒಳಗಾಗಲು ವಿಜಯಪುರದ ಜಿಲ್ಲಾ ಆಸ್ಪತ್ರೆ ವೈದ್ಯರು ಸಲಹೆ ನೀಡಿದ್ದಾರೆ. ಹೀಗಾಗಿ ಇಲ್ಲಿನ ತಮ್ಮ ನಿವಾಸಕ್ಕೆ ಶಾಸಕರು ಮರಳಿದ್ದಾರೆ.

ಕಳೆದ 4-5 ದಿನಗಳಲ್ಲಿ ಅವರ ಸಂಪರ್ಕಕ್ಕೆ ಬಂದವರೆಲ್ಲರೂ ಪರೀಕ್ಷಿಸಿಕೊಳ್ಳುವುದರ ಜೊತೆಗೆ ಸ್ವಯಂ ಪ್ರೇರಿತರಾಗಿ ಹೋಂ ಐಸೋಲೇಶನ್‌ಗೆ ಒಳಗಾಗಬೇಕು. ಮುನ್ನೆಚ್ಚರಿಕೆ ಕ್ರಮವಾಗಿ ಮುಂದಿನ 15 ದಿನಗಳ ಕಾಲ ಯಾರನ್ನೂ ಭೇಟಿ ಮಾಡದಿರಲು ಶಾಸಕರು ನಿರ್ಧರಿಸಿದ್ದು ಅವರ ಗೃಹ ಕಚೇರಿ ಸಂಪೂರ್ಣ ಬಂದ್ ಆಗಲಿದೆ ಎಂದು ಶಾಸಕರ ಆಪ್ತರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು