ಮಂಗಳವಾರ, ಮಾರ್ಚ್ 2, 2021
19 °C

ಶಾಸಕ ಎಂ.ಸಿ.ಮನಗೂಳಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಸಿಂದಗಿ ಕ್ಷೇತ್ರದ ಹಿರಿಯ ಶಾಸಕ ಎಂ. ಸಿ ಮನಗೂಳಿ (85) ಅವರು ಅನಾರೋಗ್ಯದಿಂದ ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕೋವಿಡ್ ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

15 ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದಾಗಿ‌  ಬಳಲುತ್ತಿದ್ದ ಅವರನ್ನು ಜನವರಿ 9 ರಂದು ಕಲಬುರ್ಗಿಯಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿತ್ತು. 

ಎರಡು ಬಾರಿ ಶಾಸಕರಾಗಿದ್ದ ಅವರು, ಎರಡು ಬಾರಿಯೂ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅವರಿಗೆ ಇಬ್ಬರು ಪುತ್ರರು ಇದ್ದಾರೆ.

ಶಾಸಕರು ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಸಿಂದಗಿ‌ ಪಟ್ಟಣದ ಅವರ ನಿವಾಸದಲ್ಲಿ ನೀರವ ಮೌನ ಆವರಿಸಿದೆ. 

ಮನಗೂಳಿ ಪಾರ್ಥಿವ ಶರೀರವನ್ನು ಕುಟುಂಬ ಸದಸ್ಯರು ಬೆಂಗಳೂರಿನಿಂದ ಸಿಂದಗಿಯತ್ತ ರಸ್ತೆ ಮಾರ್ಗವಾಗಿ ತೆಗೆದುಕೊಂಡು ಬರುತ್ತಿದ್ದು, ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಿಂದಗಿ ತಲುಪುವ ನಿರೀಕ್ಷೆ ಇದೆ. ಅಂತ್ಯ ಸಂಸ್ಕಾರ ಸಮಯ ಹಾಗೂ ಸ್ಥಳದ ಬಗ್ಗೆ ತಿಳಿದುಬಂದಿಲ್ಲ
 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು