ಮಂಗಳವಾರ, ಜೂನ್ 15, 2021
20 °C

ಶಾಸಕ ಸೋಮನಗೌಡ ಪಾಟೀಲ ಸಾಸನೂರಗೆ ಕೋವಿಡ್‌ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ಕ್ಷೇತ್ರದ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ ಸಾಸನೂರಗೆ ಕೋವಿಡ್‌ ಪಾಸಿಟಿವ್‌ ದೃಢಪಟ್ಟಿದೆ.

ಈ ಸಂಬಂಧ ತಮ್ಮ ಫೇಜ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿರುವ ಸಾಸನೂರ, ‘ಆಗಸ್ಟ್‌ 14ರಂದು ಆರೋಗ್ಯ ತಪಾಸಣೆ ಹಾಗೂ ಕೊರೊನಾ ಟೆಸ್ಟ್‌ ಮಾಡಿಸಿದೆ. ಕೋವಿಡ್‌ ಪಾಸಿಟಿವ್‌ ದೃಢವಾಗಿದೆ. ಸದ್ಯ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವೆ’ ಎಂದು ತಿಳಿಸಿದ್ದಾರೆ.

‘ಆರೋಗ್ಯದಲ್ಲಿ ಯಾವುದೇ ತೊಂದರೆಯಿಲ್ಲ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಬೇಗನೆ ಗುಣಮುಖನಾಗಿ ಕ್ಷೇತ್ರಕ್ಕೆ ಮರಳುತ್ತೇನೆ’ ಎಂದು ಹೇಳಿದ್ದಾರೆ.

‘ನನ್ನ ಸಂಪರ್ಕಕ್ಕೆ ಬಂದವರು ಮುಂಜಾಗೃತಾ ಕ್ರಮವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಪರಸ್ಪರ ಅಂತರ ಕಾಪಾಡಿಕೊಂಡು ಮನೆಯಲ್ಲಿ ಇರಬೇಕು’ ಎಂದು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು