ವಿಜಯಪುರ: ವಿಧಾನ ಪರಿಷತ್ತಿನ ವಾಯವ್ಯ ಪದವೀಧರ ಕ್ಷೇತ್ರ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರಕ್ಕೆ2022ರ ಜೂನ್‌ನಲ್ಲಿ ನಡೆಯಲಿರುವಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಆಕಾಂಕ್ಷಿಗಳಾಗ ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿರ್ದೇಶನದ ಮೇರೆಗೆಪಕ್ಷದ ನಿಷ್ಠಾವಂತ ಕಾರ್ಯಕರ್ತರು 2021 ಮೇ 12ರ ಒಳಗಾಗಿ ಅರ್ಜಿಗಳನ್ನು ಭರ್ತಿಮಾಡಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಲ್ಲಿಸಬಹುದಾಗಿದೆ.

ಕಾಂಗ್ರೆಸ್ ಪಕ್ಷವು ಈ ಎರಡು ಕ್ಷೇತ್ರವನ್ನು ಗೆಲ್ಲುವ ನಿಟ್ಟಿನಲ್ಲಿ ಪಣ ತೊಟ್ಟಿದ್ದು. ಈಗಿನಿಂದಲೇ ಕಾರ್ಯೋನ್ಮುಖವಾಗಿದ್ದು, ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಶತಸಿದ್ಧವಾಗಿದೆ ಎಂದುಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಕೀರ್ ಸನದಿ ಹಾಗೂ ಜಿಲ್ಲಾಧ್ಯಕ್ಷ ರಾಜು ಆಲಗೂರ ತಿಳಿಸಿದ್ದಾರೆ.

ಬಿಜೆಪಿ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದ್ದು. ಪದವೀಧರರು, ಶಿಕ್ಷಕರಿಗೆ ನ್ಯಾಯ ಒದಗಿಸಿಕೊಡಲು ಸಂಪೂರ್ಣ ವಿಫಲವಾಗಿದೆ ಎಂದು ಅವರುಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.