ಶುಕ್ರವಾರ, ಅಕ್ಟೋಬರ್ 22, 2021
29 °C

ಸಿಂದಗಿ ಉಪಚುನಾವಣೆ: ನೀತಿಸಂಹಿತೆ ಮತಕ್ಷೇತ್ರಕ್ಕೆ ಸೀಮಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿಂದಗಿ: ಸಿಂದಗಿ ವಿಧಾನಸಭಾ ಉಪಚುನಾವಣೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಕ್ಟೋಬರ್ 1 ರಿಂದ ಪ್ರಾರಂಭವಾಗಿದೆ. ಚುನಾವಣಾ ನೀತಿ ಸಂಹಿತೆ ಮತಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿದೆ ಎಂದು ಚುನಾವಣಾಧಿಕಾರಿಗಳಾದ ಇಂಡಿ ಉಪವಿಭಾಗಾಧಿಕಾರಿ ರಾಹುಲ್ ಸಿಂಧೆ ಹೇಳಿದರು.

ಇಲ್ಲಿಯ ಮಿನಿವಿಧಾನಸೌಧ ಆವರಣದ ಸಭಾಭವನದಲ್ಲಿ ಗುರುವಾರ ಸಂಜೆ ಸುದ್ದಿಗಾರರ ಜೊತೆಗೆ ಮಾತನಾಡಿದರು. ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, 297 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮೋರಟಗಿ, ದೇವಣಗಾಂವ, ಗೋಲಗೇರಿ, ವಿಭೂತಿಹಳ್ಳಿ, ತಾಂಬಾ, ಕನ್ನೊಳ್ಳಿ, ಹಂದಿಗನೂರಲ್ಲಿ ಒಟ್ಟು 7 ಚೆಕ್ ಪೋಸ್ಟ್ ಗಳನ್ನು ನಿರ್ಮಾಣ ಮಾಡಲಾಗಿದೆ ಎಂದರು.

22 ಜನ ಸೆಕ್ಟರ್ ಅಧಿಕಾರಿಗಳು 18 ಜನ ಜಾಗೃತದಳ ರಚನೆ ಮಾಡಲಾಗಿದೆ. ಮಿನಿವಿಧಾನಸೌಧ ಆವರಣದಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ. ಸಂಪರ್ಕಿಸಲು 08488 221235 ಸಹಾಯವಾಣಿ ಇದೆ. ಕೋವಿಡ್ ನಿಯಮಾವಳಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಚುನಾವಣಾ ರೋಡ್ ಷೋ ಗಳಿಗೆ ಅವಕಾಶವಿಲ್ಲ. ಮಾದರಿ ನೀತಿ ಸಂಹಿತೆಗಾಗಿ ತಂಡ ರಚನೆ ಮಾಡಲಾಗಿದೆ.  ಎಲ್ಲ ರಾಜಕೀಯ ಪ್ರತಿನಿಧಿಗಳು ಕಟ್ಟುನಿಟ್ಟಿನ ನೀತಿ ಸಂಹಿತೆ ಪಾಲಿಸಬೇಕು ಎಂದರು ತಿಳಿಸಿದರು.

ಸಹಾಯಕ ಚುನಾವಣಾಧಿಕಾರಿ ಸಂಜೀವಕುಮಾರ ದಾಸರ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು