ವಿಜಯಪುರ: ‘ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಮೋಕ್ಷ ಪಡೆಯಲು ಲೌಕಿಕ ಪ್ರಪಂಚವನ್ನು ತ್ಯಾಗ ಮಾಡದೇ, ಸಂಸಾರದಲ್ಲಿದ್ದುಕೊಂಡೇ ಸದ್ಗತಿ ಹೊಂದಿದಳು’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಭವನದಲ್ಲಿ ಭಾನುವಾರ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ 598 ನೇ ಜಯಂತಿಯಲ್ಲಿ ಅವರು ಮಾತನಾಡಿದರು.

ಮಲ್ಲಮ್ಮ ಜೀವನವಿಡಿ ಕಷ್ಟಗಳನ್ನುಂಡರೂ ತನಗೆ ನೋವುಂಟು ಮಾಡಿದವರ ಹಿತವನ್ನು ಬಯಸಿದರು. ಮನೆಯ ಒಡತಿಯಾಗಿದ್ದರೂ ದಾಸಿಯಂತೆ ಸೇವೆ ಸಲ್ಲಿಸಿ ಎಂತಹ ಕಷ್ಟದಲ್ಲಿಯೂ ಶಿವನನ್ನು ಸ್ಮರಿಸುತ್ತಿದ್ದರು ಎಂದರು.

ಪರಿಷತ್ತಿನ ಪದಾಧಿಕಾರಿಯಾದ ದಾಕ್ಷಾಯಿಣಿ ಬಿರಾದಾರ ಮಾತನಾಡಿ, ಮಹಾಶಿವಶರಣೆಯಾಗಿ ಬೆಳಗಿದ ಹೇಮರಡ್ಡಿ ಮಲ್ಲಮ್ಮ 12ನೇ ಶತಮಾನದ ಶಿವಶರಣೆಯರಂತೆ ವಚನಗಳನ್ನು ರಚಿಸಲಿಲ್ಲವಾದರೂ ಅವರ ಬದುಕೇ ಒಂದು ಬೃಹತ್ ವಚನ ಸಂಪುಟದಂತಿದೆ. ಅವರ ಜೀವನಮೌಲ್ಯಗಳು ಮನುಕುಲಕ್ಕೆ ಅದರಲ್ಲೂ ಸ್ತ್ರೀಕುಲಕ್ಕೆ ಅಮೂಲ್ಯ ಕಾಣಿಕೆಗಳಾಗಿವೆ ಎಂದರು.

ಪರಿಷತ್ತಿನ ಪದಾಧಿಕಾರಿಗಳಾದ ರಂಗನಾಥ ಅಕ್ಕಲಕೋಟ, ಎಸ್.ಡಿ.ಮಾದನ ಶೆಟ್ಟಿ, ಎಂ.ಆರ್.ಕಬಾಡೆ, ಎಸ್.ವೈ.ನಡುವಿನಕೇರಿ, ಪಂಡಿತರಾವ್ ಪಾಟೀಲ್, ಶಿವಲಿಂಗ ಕಿಣಗಿ ಶಂಕರ ಸಾತಪುತೆ ಹಾಗೂ ವಿಠ್ಠಲ್ ನಡುವಿನಮನಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.