ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

Published 14 ಆಗಸ್ಟ್ 2023, 18:26 IST
Last Updated 14 ಆಗಸ್ಟ್ 2023, 18:26 IST
ಅಕ್ಷರ ಗಾತ್ರ

ಮುದ್ದೇಬಿಹಾಳ(ವಿಜಯಪುರ): ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿ 30 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ತಗೊಂಡಿರುವ ಘಟನೆ ತಾಲ್ಲೂಕಿನ ರಕ್ಕಸಗಿ ಗ್ರಾಮದಲ್ಲಿರುವ ಕಸ್ತೂರಬಾ ಗಾಂಧಿ ಬಾಲಕಿಯರ ಹಾಸ್ಟೆಲಿನಲ್ಲಿ ಸೋಮವಾರ ರಾತ್ರಿ ನಡೆದಿದೆ.

ಮಧ್ಯಾಹ್ನ ಶಾಲೆಯಿಂದ ಬಂದ ಮೇಲೆ ಊಟ ಮಾಡಿದ್ದರು. ಬಳಿಕ ಹಲ್ಲಿ ಬಿದ್ದ ವಿಷಯ ಹರಡಿ ಹಲವರು ಆತಂಕಕ್ಕೊಳಗಾದರು. ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಹಾಸ್ಟೇಲ್ ಗೆ ವೈದ್ಯರನ್ನು ಕರೆಯಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಕೆಲವರನ್ನು ಇಲ್ಲಿನ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೂ ತಂದು ದಾಖಲಿಸಲಾಗಿದೆ. ಸದ್ಯ ಎಲ್ಲರ ಆರೋಗ್ಯ ಸ್ಥಿತಿ ನಿಯಂತ್ರಣದಲ್ಲಿದೆ ಎಂದು ವೈದ್ಯಾಧಿಕಾರಿ ಡಾ. ಅನೀಲಕುಮಾರ ಶೇಗುಣಸಿ ತಿಳಿಸಿದ್ದಾರೆ. ಹಾಸ್ಟೇಲಿನ ಅಡುಗೆ ಮನೆಯಲ್ಲಿ ಸ್ವಚ್ಛತೆ ಇಲ್ಲದಿರುವುದು, ಅಡುಗೆಯವರು ಕಾಳಜಿ ವಹಿಸಿ ಗುಣಮಟ್ಟದ ಅಡುಗೆ ಮಾಡದಿರುವುದು ಈ ರೀತಿಯ ಸಮಸ್ಯೆಗೆ ಕಾರಣವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಸದ್ಯ ಯಾವೊಬ್ಬ ವಿದ್ಯಾರ್ಥಿನಿಯೂ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ಸದ್ಯ ರಾತ್ರಿಯೇ ಹಾಸ್ಟೇಲಿಗೆ ಸಮೀಪದ ಗರಸಂಗಿ‌ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಆರೋಗ್ಯ ಸಿಬ್ಬಂದಿ ತಂಡ ಧಾವಿಸಿದ್ದು ಅಸ್ವಸ್ಥ ವಿದ್ಯಾರ್ಥಿನಿಯರಿಗೆ ಹೆಚ್ಚುವರಿ ಚಿಕಿತ್ಸೆ ನೀಡತೊಡಗಿದ್ದಾರೆ. ಗ್ರಾಮಸ್ಥರು ಹಾಸ್ಟೇಲಿಗೆ ಹೋಗಿ ವಾರ್ಡನ್, ಅಡುಗೆ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದ್ದು ತಪ್ಪಿತಸ್ತರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT