ಶನಿವಾರ, ಜುಲೈ 31, 2021
27 °C

ಹೆರಿಗೆ ವೇಳೆ ಬಾಣಂತಿ, ಮಗು ಸಾವು: ಪೋಷಕರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಸಾವಿಗೆ ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಪೋಷಕರು ಶನಿವಾರ ಪ್ರತಿಭಟನೆ ನಡೆಸಿದರು.

ಇಂಡಿ ಪಟ್ಟಣದ ಕವಿತಾ ಆನಂದ ಅಂಜುಟಗಿ(24) ಶುಕ್ರವಾರ ಸಂಜೆ ಹೆರಿಗೆ ಸಂಬಂಧ ವಿಜಯಪುರ ನಗರದಲ್ಲಿರುವ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಬೆಳಿಗ್ಗೆ ಹೆರಿಗೆ ವೇಳೆಯಲ್ಲಿ ಮಗು ಹೊಟ್ಟೆಯಲ್ಲೇ ಮೃತಪಟ್ಟಿದೆ. ನಂತರ ಶಸ್ತ್ರಚಿಕಿತ್ಸೆ ಮೂಲಕ ಮಗುವನ್ನು ಹೊರಗೆ ತೆಗೆಯುವ ವೇಳೆಯಲ್ಲಿ ತಾಯಿ ಸಹ ಮೃತಪಟ್ಟಿದ್ದಾರೆ ಎಂದು ಪೋಷಕರು ತಿಳಿಸಿದರು.

ಗಾಂಧಿಚೌಕ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.