ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ತಾಯಿಯ ಹಾಲು ಅಮೃತಕ್ಕೆ ಸಮಾನ’

Published 2 ಆಗಸ್ಟ್ 2024, 15:52 IST
Last Updated 2 ಆಗಸ್ಟ್ 2024, 15:52 IST
ಅಕ್ಷರ ಗಾತ್ರ

ವಿಜಯಪುರ: ತಾಯಿಯ ಹಾಲು ಅಮೃತಕ್ಕೆ ಸಮಾನ, ಎಲ್ಲಾ ತಾಯಂದಿರು ಮಗುವಿಗೆ ಹಾಲುಣಿಸುವುದನ್ನು ನಿರ್ಲಕ್ಷಿಸಬಾರದು. ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳ ಆರೋಗ್ಯ ಸುಧಾರಣೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಮಕ್ಕಳ ಆರೋಗ್ಯ ಸುಧಾರಣೆ ನಿಟ್ಟಿನಲ್ಲಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ವಿಜಯಪುರ  ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು.

ತಾಯಿಯು ಸ್ತನ್ಯಪಾನ ಮಾಡುವುದರಿಂದ ಮಗುವಿನ ಆರೋಗ್ಯದಲ್ಲಿ ಆಗುವ ಧನಾತ್ಮಕ ಪರಿಣಾಮಗಳು, ಮಗುವಿನ ಬುದ್ದಿಶಕ್ತಿಯನ್ನು ಹೆಚ್ಚಿಸುತ್ತದೆ. ತಾಯಿಯ ಹೆರಿಗೆಯ ಅಂತರವನ್ನು ಹೊಂದುವುದುರಿಂದ ಸ್ತನ, ಅಂಡಾಶಯದ ಕ್ಯಾನ್ಸರ್‌ ಮತ್ತು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಮಗುವಿಗೆ ಹಾಲುಣಿಸುವಿಕೆಯಿಂದ ಸಾಂಕ್ರಾಮಿಕ ಕಾಯಿಲೆಗಳು, ಅತೀಸಾರ, ಉಸಿರಾಟದ ಸೋಂಕುಗಳನ್ನು ದೂರವಿಡಬಹುದು ಎಂದು ಹೇಳಿದರು.

ಆರ್.ಎಂ.ಒ. ಡಾ.ಸುರೇಶ ಚವ್ಹಾಣ ಮಾತನಾಡಿ, ಹುಟ್ಟಿದ ಮಗುವಿಗೆ ಆರು ತಿಂಗಳ ತನಕ ತಾಯಿಯ ಹಾಲೊಂದನ್ನೇ ಕೊಡಬೇಕು. ತಾಯಿ ಸ್ತನ್ಯಪಾನ ಕೊಡುವುದರಿಂದ ಶೇ 25ರಷ್ಟು ಶಿಶು ಮರಣವನ್ನು ಕಡಿಮೆ ಮಾಡಬಹುದು ಎಂದು ಹೇಳಿದರು.

ಜಿಲ್ಲಾಸ್ಪತ್ರೆಯ ಚಿಕ್ಕಮಕ್ಕಳ ತಜ್ಞ ಡಾ.ಸುಧೀರ ಚವ್ಹಾಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ ಡಾ.ಕೆ.ಡಿ.ಗುಂಡಬಾವಡಿ, ಚಿಕ್ಕಮಕ್ಕಳ ತಜ್ಞರಾದ ಡಾ.ವಿನಯ, ಡಾ.ಸುನೀಲ ರೂಡಗಿ ಡಾ.ಶೈಲಾಶ್ರೀ ರಮೇಶ ರಾಠೋಡ, ಜಿಲ್ಲಾ ಆರೋಗ್ಯ ಮೇಲ್ವಿಚಾರಣಾಧಿಕಾರಿ ಮೊತಿಲಾಲ ಚವ್ಹಾಣ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೇಖಾ ದಶವಂತ,  ಡಿಇಒ ಕುಮಾರ ರಾಠೋಡ, ಶ್ರೀದೇವಿ ಮೋರೆ, ಡಾ.ಅಪೂರ್ವ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT