ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸದ ರಮೇಶ ಜಿಗಜಿಣಗಿಗೆ ಶಸ್ತ್ರ ಚಿಕಿತ್ಸೆ

Published 3 ಮಾರ್ಚ್ 2024, 19:10 IST
Last Updated 3 ಮಾರ್ಚ್ 2024, 19:10 IST
ಅಕ್ಷರ ಗಾತ್ರ

ವಿಜಯಪುರ: ಸಂಸದ ರಮೇಶ ಜಿಗಜಿಣಗಿ ಅವರು ಮಿದುಳಿನಲ್ಲಿ ರಕ್ತಸ್ರಾವ ಸಮಸ್ಯೆಯಿಂದಾಗಿ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಅವರಿಗೆ ವೈದ್ಯರು ಶಸ್ತ್ರ ಚಿಕಿತ್ಸೆ‌ ಮಾಡಿದ್ದಾರೆ. ಸದ್ಯ ಐಸಿಯುನಲ್ಲಿ ಇದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಭಾನುವಾರ ತಿಳಿಸಿವೆ.

‘ಸಂಸದ ಜಿಗಜಿಣಗಿ ಅವರು ಶಸ್ತ್ರ ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ. ಒಂದೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ರಾಜಕೀಯ ಉದ್ದೇಶದಿಂದ ಕೆಲವರು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಯಾವುದೇ ಊಹಾಪೋಹಗಳಿಗೆ ಜನರು ಕಿವಿಗೊಡಬಾರದು’ ಎಂದು ಕುಟುಂಬದವರು ತಿಳಿಸಿದ್ದಾರೆ.

ಈ ಹಿಂದೆ ಜ.28ರಂದು ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಬಾಗಲಕೋಟೆಯ ಹಾನಗಲ್ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿದ ಬಳಿಕ ಗುಣಮುಖರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT