ಮುದ್ದೇಬಿಹಾಳ : ತಾಲ್ಲೂಕಿನ ಮುದ್ನಾಳ ಗ್ರಾಮದ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ ಗುರುವಾರ ನಡೆಯಿತು.

ಹಡಲಗೇರಿ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮಾಹಿತಿ, ಶಿಕ್ಷಣ ಹಾಗೂ ಸಂಹವನ ಕಾರ್ಯಕ್ರಮ ಹಾಗೂ ಅರೋಗ್ಯ ಇಲಾಖೆ ಸಹಯೋಗದಲ್ಲಿ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿತ್ತು.

ಆರೋಗ್ಯ ಉಚಿತ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಎಸ್.ಗಣಚಾರಿ, ಹಡಲಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುದ್ನಾಳ ಗ್ರಾಮದ ನರೇಗಾ ಕೂಲಿಕಾರರಿಗೆ ಕಳೆದ ಒಂದು ತಿಂಗಳಿಂದ ಕೂಲಿ ಕೆಲಸ ಒದಗಿಸಲಾಗಿದೆ. ಖಾತ್ರಿ ಯೋಜನೆಯಡಿ ನಿರಂತರ ಕೆಲಸ ನೀಡಲಾಗಿದ್ದು, ವಲಸೆ ಪ್ರವೃತ್ತಿ ಕಡಿಮೆಯಾಗಿದೆ ಎಂದು ಹೇಳಿದರು.

ನರೇಗಾ ಯೋಜನೆಯಡಿ ದುಡಿದ ಕೂಲಿಕಾರರಿಗೆ ಆರೋಗ್ಯ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ಬಿಸಿಲಿನಲ್ಲಿ ಸತತ ಕೆಲಸ ಮಾಡುವುದರಿಂದ ಆರೋಗ್ಯದಲ್ಲಿ ವ್ಯತ್ಯಾಸ ಕಾಣಲಿದೆ. ಕೂಲಿಕಾರರ ಸದೃಢ ಆರೋಗ್ಯಕ್ಕೆ ಶಿಬಿರ ಏರ್ಪಡಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಆರೋಗ್ಯ ಇಲಾಖೆಯ ಅಧಿಕಾರಿಗಳು ಕೂಲಿಕಾರರ ಆರೋಗ್ಯ ತಪಾಸಣೆ ಮಾಡಿ ಮಧುಮೇಹ, ರಕ್ತದೊತ್ತಡ, ಮಲೇರಿಯಾ ಹಾಗೂ ಕಫ ಪರೀಕ್ಷೆ ಮಾಡಿ ಸಮಾಲೋಚನೆ ನಡೆಸಿದರು.

ನರೇಗಾ ಯೋಜನೆ ತಾಲ್ಲೂಕು ಐಇಸಿ ಸಂಯೋಜಕ ಪರಮೇಶ ಹೊಸಮನಿ, ಆರೋಗ್ಯ ನಿರೀಕ್ಷಾಧಿಕಾರಿ ಸಿ.ಜಿ.ಬಿದರಕುಂದಿ, ಸಿಎಚ್ ಇ ಮಂಜುನಾಥ, ಉಪಾಧ್ಯಕ್ಷೆ ಲಕ್ಷ್ಮೀಬಾಯಿ ಮ.ಪರಪ್ಪಗೋಳ, ಡಿಇಒ ಮಲ್ಲಿಕಾರ್ಜುನ ಬಿದರಕುಂದಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.