ಮುದ್ದೇಬಿಹಾಳ: ತಾಲ್ಲೂಕಿನ ಚವನಭಾವಿ ಗ್ರಾಮದಲ್ಲಿ ಜಲ ಜೀವನ ಮಿಷನ್ (ಜೆಜೆಎಂ) ಯೋಜನೆಯಡಿ ಅನುಷ್ಠಾನಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಮಂಗಳವಾರ ಬೆಂಗಳೂರಿನ ರಾಜ್ಯ ಗುಣಮಟ್ಟದ ಮೇಲ್ವಿಚಾರಣಾ ಅಧಿಕಾರಿ ಮೋಹನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಧಿಕಾರಿಗಳು ಗ್ರಾಮದ ಮನೆ ಮನೆಗೆ ತೆರಳಿ ಪರಿಶೀಲಿಸಿದರು.

‘ಗ್ರಾಮದಲ್ಲಿ ಕೇವಲ ಒಂದು ಕೊಳವೆ ಬಾವಿ ಇದೆ. ಸರಿಯಾದ ನೀರಿನ ಮೂಲ ಇಲ್ಲದ ಕಾರಣ ನಳಗಳಿಗೆ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ. ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ಅಡಿ ನೀರು ಬಂದರೆ ನಮಗೆ ಸೌಲಭ್ಯ ಸಿಗುತ್ತದೆ, ಇಲ್ಲದಿದ್ದರೆ ಕುಡಿಯುವ ನೀರಿಗೆ ಪರದಾಡುವಂತಾಗಿದೆ’ ಎಂದು ಗ್ರಾಮಸ್ಥರು ಸಮಸ್ಯೆ ವಿವರಿಸಿದರು.

ಕೆಲವು ವಾರ್ಡ್ಗಳಲ್ಲಿ ಜೆಜಿಎಂ ನಳದಲ್ಲಿ ನೀರು ಪೂರೈಕೆಯಾಗುತ್ತಿಲ್ಲ. ಕಾಮಗಾರಿಯ ಗುಣಮಟ್ಟ ಮತ್ತು ನೀರಿನ ಹಂಚಿಕೆಯಲ್ಲಿನ ಲೋಪಗಳ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು.

ದೂರುಗಳನ್ನು ಆಲಿಸಿದ ಅಧಿಕಾರಿ ಮೋಹನ್, ‘ಗ್ರಾಮದ ಕಾಮಗಾರಿಗಳ ಕುರಿತು ಸಮಗ್ರವಾಗಿ ಪರಿಶೀಲಿಸಿದ್ದು, ಈ ಬಗ್ಗೆ ಶೀಘ್ರವೇ ವರದಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು’ ಎಂದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಂಜಿನಿಯರ್ ಎ.ಎಲ್.ರಾಠೋಡ, ಬಸನಗೌಡ ಬಿರಾದಾರ, ಅಂಬ್ರಯ್ಯ ಮಠ, ಬಸವರಾಜ ಕುಂಬಾರ, ಬಸಪ್ಪ ಬಿರಾದಾರ, ವೀರೇಶ ಚಲವಾದಿ, ಬೀರಪ್ಪ ಸೋಮನಾಳ, ಮೌನೇಶ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-26-357974014

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.