‘ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಸಂತ್ರಸ್ಥೆ ಎಸ್.ಸಿ. ವರ್ಗಕ್ಕೆ ಸೇರಿದ್ದರಿಂದ ಆಕೆಗೆ ಆಗಿರುವ ಅನ್ಯಾಯಕ್ಕೆ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು' ಎಂದು ವಿವಿಧ ದಲಿತಪರ ಸಂಘಟನೆಯ ಮುಖಂಡರು ವಿದ್ಯಾರ್ಥಿ ಸಂಘಟನೆಯವರು ಆಸ್ಪತ್ರೆಯಲ್ಲಿ ಪೊಲೀಸ್ ಠಾಣೆಯ ಎದುರಿಗೆ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದರು.
ಮುದ್ದೇಬಿಹಾಳ ತಾಲ್ಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಆತ್ಮಹತ್ಯೆಗೆ ಪ್ರಚೋಧನೆ ನೀಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗ್ರಹಿಸಿ ಎಬಿವಿಪಿ ಸಂಘಟನೆಯ ಪದಾಧಿಕಾರಿಗಳು ಬುಧವಾರ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.