ಮುದ್ದೇಬಿಹಾಳ: ಸಾರ್ವಜನಿಕರು ಸೊಳ್ಳೆ ಸಂತಾನೋತ್ಪತ್ತಿ ತಾಣಗಳ ಬಗ್ಗೆ ಜಾಗೃತಿ ವಹಿಸಿ ಸೊಳ್ಳೆ ನಿರ್ಮೂಲನೆ ಬಗ್ಗೆ ಎಚ್ಚರ ವಹಿಸಬೇಕೆಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಸತೀಶ್ ತಿವಾರಿ ಹೇಳಿದರು.

ಅವರು ಪಟ್ಟಣದ ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶ್ರೀ ಸಿದ್ದಗಂಗಾ ಪ್ಯಾರಾ ಮೆಡಿಕಲ್ ಕಾಲೇಜು ಸಹಯೋಗದಲ್ಲಿ ನಡೆದ ಮಲೇರಿಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್ ಗೌಡರ ಮಾತನಾಡಿ, ‘ಸೊಳ್ಳೆಗಳಿಂದ ಬರುವ ರೋಗಗಳಲ್ಲಿ ಮಲೇರಿಯಾ ರೋಗವು ಕೂಡ ಒಂದು. ಇದು ಪ್ಲಾಸ್ಮೋಡಿಯಾ ಎಂಬ ಸೂಕ್ಷ್ಮಾಣು ಪರಾವಲಂಬಿ ಮೂಲಕ ಬರುತ್ತದೆ. ಹೆಣ್ಣು ಅನಾಫಿಲಿಸ್ ಸೊಳ್ಳೆಯು ಮಲೇರಿಯಾ ಸೋಂಕಿತ ವ್ಯಕ್ತಿಗೆ ಕಚ್ಚಿ ರಕ್ತ ಹೀರಿ ಆರೋಗ್ಯವಂತ ವ್ಯಕ್ತಿಗೆ ಕಚ್ಚುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಮಲೇರಿಯಾ ರೋಗ ಲಕ್ಷಣಗಳಲ್ಲಿ ಮೊದಲು ಚಳಿ ನಂತರ ವಿಪರೀತ ಜ್ವರ ಬಂದು ಕೊನೆಗೆ ಬೆವರುವಿಕೆಯಿಂದ ಆರಾಮ ಎನಿಸುತ್ತದೆ. ಇದೇ ಲಕ್ಷಣಗಳು ಪುನರಾವರ್ತನೆಗೊಳ್ಳುತ್ತದೆ’ ಎಂದರು.

ವಿಬಿಡಿ ಮೇಲ್ವಿಚಾರಕ ಎಸ್.ಸಿ ರುದ್ರವಾಡಿ ಮಾತನಾಡಿ, ‘ಮಲೇರಿಯಾ ರೋಗವನ್ನು ಸಂಪೂರ್ಣ ನಿಯಂತ್ರಿಸುವಲ್ಲಿ ಪಣ ತೊಡೋಣ, ಮನೆ ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವುದರ ಜೊತೆಗೆ ಮನೆಯಲ್ಲಿ ಮತ್ತು ಮನೆ ಸುತ್ತಮುತ್ತ ಸೊಳ್ಳೆಗಳು ನಿಂತ ನೀರಿನಲ್ಲಿ ಮೊಟ್ಟೆ ಇಟ್ಟು ಸಂತಾನೋತ್ಪತ್ತಿ ಮಾಡುತ್ತವೆ. ಸೊಳ್ಳೆಗಳ ಸಂತತಿ ಕಡಿಮೆ ಮಾಡಲು ಪರಿಸರದಲ್ಲಿ ಹಾಗೂ ಮನೆಯ ಸುತ್ತಮುತ್ತಲೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದರು.

ಈ ವೇಳೆ ಆರೋಗ್ಯ ನಿರೀಕ್ಷಣಾಧಿಕಾರಿ ಯಲ್ಲಪ್ಪ ಚಲವಾದಿ, ಎ.ಪಿ ಶಾಸ್ತ್ರಿಮಠ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅನುಸೂಯಾ ತೇರದಾಳ, ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಪ್ರಶಾಂತ್ ಕಡಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವೀರೇಶ ಎಸ್.ಬಿ ವಿಜಯ ಹೂಗಾರ, ಕಾಲೇಜಿನ ಶಿಕ್ಷಕರಾದ ಹಿನಾಕೌಸರ್ ಸುತಾರ, ಮುನಿರಾಬೇಗಂ ನದಾಫ, ಪಾರ್ವತಿ ಹಿರೇಮಠ, ಮಲ್ಲಿಕಾರ್ಜುನ ಹೆಬ್ಬಾಳ ಹಾಗೂ ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-26-569661799

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.