ಮುದ್ದೇಬಿಹಾಳ: ಈಚೆಗೆ ಹತ್ಯೆಯಾದ ತಾಲ್ಲೂಕಿನ ನಾಗರಬೆಟ್ಟದ ರವಿಚಂದ್ರ ಮಾದರ ಮನೆಗೆ ಮುದ್ದೇಬಿಹಾಳ ತಹಶೀಲ್ದಾರ್ ಕೀರ್ತಿ ಚಾಲಕ ಶುಕ್ರವಾರ ಭೇಟಿ ನೀಡಿ ಪರಿಹಾರ ನೀಡುವ ಭರವಸೆ ನೀಡಿದರು.

ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅವರು, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ₹4,12,500 ಪರಿಹಾರ ನೀಡಲಾಗುತ್ತದೆ. ಕುಟುಂಬಸ್ಥರಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು. ಸದ್ಯ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಕುಟುಂಬ ನಿರ್ವಹಣೆಗೆ ಸಹಾಯ ಮಾಡಲಾಗುವುದು ಎಂದರು.

ಮೃತರ ಕುಟುಂಬದವರು ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಿ, ‘ಕುಟುಂಬಸ್ಥರಿಗೆ ನ್ಯಾಯ ಒದಗಿಸಬೇಕು. ಮೃತ ಯುವಕನ ಸಹೋದರ ಮಂಜುನಾಥ ದೇವಪ್ಪ ಮಾದರಗೆ ಸರ್ಕಾರಿ ನೌಕರಿ ಒದಗಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಲ್ಲೂಕು ಪಂಚಾಯಿತಿ ಇಒ ಸಂಗನಗೌಡ ಬಿರಾದಾರ, ಸಮಾಜ ಕಲ್ಯಾಣ ಇಲಾಕೆಯ ಬಸಂತಿ ಮಠ, ಕಂದಾಯ ನೀರಿಕ್ಷಕ ವೆಂಕಟೇಶ ಅಂಬಿಗೇರ, ತಿಪ್ಪಣ್ಣ ದೊಡಮನಿ, ದೇವಪ್ಪ ಮಾದರ, ಮಲ್ಲು ಬಿಜ್ಜೂರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-26-721317562

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.