ಮುದ್ದೇಬಿಹಾಳ: ಹಕ್ಕು ಪತ್ರ ನೀಡಲು ಅಧಿಕಾರಿಗಳು ಲಿಖಿತ ಭರವಸೆ ನೀಡಿದ ಪರಿಣಾಮ 14 ದಿನಗಳಿಂದ ನಡೆಯುತ್ತಿದ್ದ ಧರಣಿ ಸತ್ಯಾಗ್ರಹ ಸೋಮವಾರ ಅಂತ್ಯವಾಗಿದೆ.

ಪಟ್ಟಣದ ಇಂದಿರಾನಗರ ಸೇರಿದಂತೆ ಆಶ್ರಯ ನಿವಾಸಿಗಳು ಮನೆಯ ಉತಾರ ನೀಡುವಂತೆ ಮೇ 4ರಂದು ತಹಶೀಲ್ದಾರ್ ಕಚೇರಿ ಆವರಣದಲ್ಲಿ ಸತ್ಯಾಗ್ರಹ ಹಮ್ಮಿಕೊಂಡಿದ್ದರು.

ಸತ್ಯಾಗ್ರಹ ಸ್ಥಳಕ್ಕೆ ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಆಗಮಿಸಿ, ಧರಣಿ ನಿರತರಿಗೆ ಲಿಖಿತ ರೂಪದ ದಾಖಲೆ ನೀಡಿದರು. ಈಗಾಗಲೇ ಪ್ರಕರಣ ನ್ಯಾಯಾಲಯದಲ್ಲಿ ಇರುವ ಕಾರಣ ಮತ್ತು ಮೇ19ರಿಂದ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿಯಿಂದ ಸರ್ವೆ ಕಾರ್ಯ ಆರಂಭಿಸಿ ಅರ್ಹ ಫಲಾನುಭವಿಗಳಿಗೆ ಉತಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದರು. ಆಗ ಸತ್ಯಾಗ್ರಹವನ್ನು ಆಶ್ರಯ ನಿವಾಸಿಗಳು ತಾತ್ಕಾಲಿಕವಾಗಿ ಕೈಬಿಟ್ಟಿದ್ದಾರೆ. ಪುರಸಭೆ ಮಾಜಿ ಅಧ್ಯಕ್ಷ ಮಹಿಬೂಬ ಗೊಳಸಂಗಿ,ಬಸವರಾಜ ಭಜಂತ್ರಿ, ಬಬ್ಬು ಹುಣಸಗಿ, ಬಸವರಾಜ ಕೋಳೂರ, ಗೋಪಿ ಮಡಿವಾಳರ, ಪುರಸಭೆ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-26-909035462

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.