ಮುದ್ದೇಬಿಹಾಳ: ಸೋಮವಾರದಿಂದ ಶಾಲೆಗಳು ಆರಂಭಗೊಂಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್ಎನ್ಡಿ ಪಬ್ಲಿಕ್ ಶಾಲೆಯ ಆರಂಭೋತ್ಸವ ಸರಳವಾಗಿ ನಡೆಸಲಾಯಿತು.

ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಅವರ ನೇತೃತ್ವದಲ್ಲಿ ಶಿಕ್ಷಕರು ಸರಸ್ವತಿ ದೇವಿ ಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಶಾಲೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ ತಹಶೀಲ್ದಾರ್ ಕೀರ್ತಿ ಚಾಲಕ್ ಅವರು, ಸರಸ್ವತಿ ದೇವಿಗೆ ನಮಿಸಿ ಶಾಲಾ ಮಕ್ಕಳಿಗೆ ಹೂವು ನೀಡಿ ಶಾಲಾ ಆರಂಭೋತ್ಸವಕ್ಕೆ ಚಾಲನೆ ನೀಡಿದರು.

ಇದೇ ವೇಳೆ ಮಾತನಾಡಿದ ತಹಶೀಲ್ದಾರ್ ಚಾಲಕ್ ಅವರು, ಗ್ರಾಮೀಣ ಭಾಗದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡುವತ್ತ ಶಿಕ್ಷಕರು,ಪಾಲಕರು ಮುಂದಾಗಬೇಕು ಎಂದು ಸಲಹೆ ನೀಡಿದರು.

ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ, ಶಾಲೆಯ ಮುಖ್ಯಗುರುಮಾತೆ ರೇಖಾ ಎಂ.ಎಸ್., ಶಿಕ್ಷಕಿಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-26-1956649743

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.