ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೇವಸ್ಥಾನದ ಆಭರಣ ಕಳವು: ಆರೋಪಿ ಬಂಧನ

Published 12 ಡಿಸೆಂಬರ್ 2023, 13:16 IST
Last Updated 12 ಡಿಸೆಂಬರ್ 2023, 13:16 IST
ಅಕ್ಷರ ಗಾತ್ರ

ಮುದ್ದೇಬಿಹಾಳ: ತಾಲ್ಲೂಕಿನ ಹಿರೇಮುರಾಳದ ದ್ಯಾಮವ್ವದೇವಿ ಗುಡಿಯಲ್ಲಿ ನ.30 ರಂದು ಗರ್ಭಗುಡಿಯ ಬಾಗಿಲಿನ ಬೀಗ ಮುರಿದು ಮೂರ್ತಿಯ ಮೇಲಿದ್ದ ಚಿನ್ನಾಭರಣ ಕದ್ದಿರುವ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ.

ಹಿರೇಮುರಾಳದ ಬೈಲಪ್ಪ ಭೀಮಪ್ಪ ಚಲವಾದಿ ಎಂಬ ಆರೋಪಿಯನ್ನು ಬಂಧಿಸಿ, ₹1.80 ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಈತನೊಂದಿಗೆ ಕಳ್ಳತನದಲ್ಲಿ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿ ಶಬ್ಬೀರ ಲಾಲಸಾಬ ಗಂಗೂರ ಪರಾರಿಯಾಗಿದ್ದಾನೆ.

ಘಟನೆಗೆ ಸಂಬಂಧಿಸಿದಂತೆ ಹಿರೇಮುರಾಳ ಗ್ರಾಮದ ಸುರೇಶ ಬಡಿಗೇರ ಅವರು ದ್ಯಾಮವ್ವ ದೇವಸ್ಥಾನದಲ್ಲಿನ ₹1.46 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ನಡೆದಿದೆ ಎಂದು ಪೊಲೀಸರಿಗೆ ದೂರು ನೀಡಿದ್ದರು.

ಕಾರ್ಯಾಚರಣೆ ನಡೆಸಿದ ಪಿಎಸ್‌ಐ ಸಂಜಯ ತಿಪರೆಡ್ಡಿ, ಅಪರಾಧ ವಿಭಾಗದ ಪಿ.ಎಸ್.ಐ. ಆರ್.ಎಲ್.ಮನ್ನಾಭಾಯಿ ಹಾಗೂ ಸಿಬ್ಬಂದಿಯನ್ನು ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಅಭಿನಂದಿಸಿ ನಗದು ಬಹುಮಾನ ಘೋಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT