ಮುದ್ದೇಬಿಹಾಳ: ತಾಲ್ಲೂಕಿನ ನಾಗರಬೆಟ್ಟ ಗ್ರಾಮದ ಯುವಕನನ್ನು ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಬುಧವಾರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮೃತ ಯುವಕನ ಶವ ಇಟ್ಟು ನಾಲ್ಕು ಗಂಟೆಗಳ ಕಾಲ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು.

ಹತ್ಯೆ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಘೋಷಣೆ ಕೂಗಿದರು. ಸ್ಥಳಕ್ಕೆ ಡಿವೈಎಸ್ಪಿ ಬಂದು ಭರವಸೆ ನೀಡುವ ವರೆಗೂ ಪ್ರತಿಭಟನೆ ಮಾಡುತ್ತೇವೆ ಎಂದು ಪಟ್ಟು ಹಿಡಿದರು.

ನಾಗರಬೆಟ್ಟ ಗ್ರಾಮದ ಯುವಕ ರವಿಚಂದ್ರ ಮಾದರನನ್ನು ಬಾಗೇವಾಡಿ ತಾಲ್ಲೂಕಿನ ಹಂಗರಗಿ ಹತ್ತಿರ ಹತ್ಯೆ ಮಾಡಿ ನೇಣು ಹಾಕಿದ್ದಾರೆ ಎಂದು ಆರೋಪಿಸಿದರು. ದಲಿತ ಮುಖಂಡರಾದ ಹರೀಶ ನಾಟಿಕಾರ, ಚನ್ನಪ್ಪ ವಿಜಯಕರ, ತಿಪ್ಪಣ್ಣ ದೊಡಮನಿ, ಬಸವರಾಜ ಪೂಜಾರಿ,ಬಾಲಚಂದ್ರ ಹುಲ್ಲೂರ, ಕೆ.ಬಿ.ದೊಡಮನಿ, ಆನಂದ ಮುದೂರ ಮಾತನಾಡಿದರು.

ಪ್ರತಿಭಟನಾ ನಿರತರೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿದ ಡಿವೈಎಸ್ಪಿ, ನಿಷ್ಪಕ್ಷಪಾತವಾಗಿ ತನಿಖೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಟ್ಟರು. ಮುಂಜಾಗ್ರತಾ ಕ್ರಮವಾಗಿ ಸಿಪಿಐ ಮಹಮ್ಮದ್ ಫಸಿಯುದ್ಧಿನ, ಪಿಎಸ್ಐ ಸಂಜಯ ತಿಪರೆಡ್ಡಿ, ಅಪರಾಧ ವಿಭಾಗದ ಪಿಎಸ್ಐ ಆರ್.ಎಸ್. ಬಂಗಿ, ಸಿಬ್ಬಂದಿ ಸೂಕ್ತ ಬಂದೋಬಸ್ತ್ ಹಮ್ಮಿಕೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-26-114035804

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.