ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಪಟ್ಟಣ ಪಂಚಾಯ್ತಿ, ಪುರಸಭೆ ಚುನಾವಣೆ ಫಲಿತಾಂಶ: ಬಿಜೆಪಿಗೆ ಗೆಲುವು

Published 30 ಡಿಸೆಂಬರ್ 2023, 5:33 IST
Last Updated 30 ಡಿಸೆಂಬರ್ 2023, 5:33 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣ ಪಂಚಾಯಿತಿಗೆ ನಡೆದಿದ್ದ ಚುನಾವಣೆ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಬಿಜೆಪಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

16 ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು, 8 ಸ್ಥಾನಗಳಲ್ಲಿ ಬಿಜೆಪಿ, 4 ಸ್ಥಾನಗಳಲ್ಲಿ ಕಾಂಗ್ರೆಸ್ ಹಾಗೂ 4 ಸ್ಥಾನಗಳಲ್ಲಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ.

ಉಪ ಚುನಾವಣೆ– ಕಾಂಗ್ರೆಸ್‌ಗೆ ಗೆಲುವು:

ಮುದ್ದೇಬಿಹಾಳ ಪುರಸಭೆಯ ವಾರ್ಡ್ ನಂ. 18ಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಬಸವನಬಾಗೇವಾಡಿ ತಾಲ್ಲೂಕಿನ ಮನಗೂಳಿ ಪಟ್ಟಣ ಪಂಚಾಯಿತಿಯ ವಾರ್ಡ್ ನಂಬರ್ 7ಕ್ಕೆ ನಡೆದ ಉಪಚುನಾವಣೆಯಲ್ಲಿ ‌ಕಾಂಗ್ರೆಸ್ ಅಭ್ಯರ್ಥಿ ಜಯ ಸಾಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT