ಶನಿವಾರ, ಸೆಪ್ಟೆಂಬರ್ 25, 2021
24 °C
ನಾಗರಕಲ್ಲು, ಮೂರ್ತಿ, ಹುತ್ತಕ್ಕೆ ಮುತ್ತೈದೆಯರಿಂದ ಕ್ಷೀರಾಭಿಷೇಕ, ಉಂಡೆ ನೈವೇದ್ಯ

‘ಗುಮ್ಮಟನಗರಿ’ಯಲ್ಲಿ ನಾಗರಪಂಚಮಿ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶುಕ್ರವಾರ ನಾಗರ ಪಂಚಮಿಯನ್ನು ಶ್ರದ್ಧೆ–ಭಕ್ತಿಯಿಂದ ಆಚರಿಸಲಾಯಿತು.

ಮಹಿಳೆಯರು ನಾಗ ದೇವಸ್ಥಾನಕ್ಕೆ ಭೇಟಿ ಕೊಟ್ಟು ನಾಗ ವಿಗ್ರಹ, ನಾಗರ ಕಟ್ಟೆ, ನಾಗರ ಕಲ್ಲು, ಹುತ್ತಕ್ಕೆ ಹಾಲೆರೆದು ಪೂಜೆ ಸಲ್ಲಿಸಿದರು. ಬಗೆಬಗೆಯ ಉಂಡೆ, ಅರಳನ್ನು ನೈವೇದ್ಯವಾಗಿ ಅರ್ಪಿಸಿ, ಇಷ್ಟಾರ್ಥ ಸಿದ್ಧಿಗಾಗಿ ನಾಗದೇವತೆ ಬಳಿ ಬೇಡಿಕೊಂಡರು.

ನಗರದ ಮನಗೂಳಿ ಅಗಸಿಯ ಹನುಮಾನ್‌ ದೇವಸ್ಥಾನ, ಬಾಗಲಕೋಟೆ ರಸ್ತೆಯ ರೈಲ್ವೆ ಗೇಟ್‌ ಬಳಿ ಇರುವ ಹನುಮಾನ್‌ ದೇವಸ್ಥಾನ, ಕನಕದಾಸ ಬಡಾವಣೆಯಲ್ಲಿರುವ ಅಂಬಾಭವಾನಿ ದೇವಸ್ಥಾನ, ಶಾಹಪೇಟೆ, ಸಿದ್ಧೇಶ್ವರ ಗುಡಿ ಆವರಣ, ಬುದ್ದವಿಹಾರ ಸಮೀಪದ ಆಂಜನೇಯ ದೇವಸ್ಥಾನ ಸೇರಿದಂತೆ ನಗರದ ಬಹುತೇಕ ಬಡಾವಣೆಗಳ ವಿವಿಧ ದೇವಸ್ಥಾನಗಳ ಆವರಣದಲ್ಲಿ ಇರುವ ನಾಗರಕಟ್ಟೆಗಳಲ್ಲಿ ಮುತ್ತೈದೆಯರು ಬೆಳಿಗ್ಗೆಯಿಂದ ಸಂಜೆವರೆಗೂ ನಾಗ ದೇವತೆಗೆ ಕ್ಷೀರಾಭಿಷೇಕ ಮಾಡುತ್ತಿದ್ದ ದೃಶ್ಯ ಕಂಡುಬಂದಿತು.

ನಗರದ ವಜ್ರ ಹನುಮಾನ್‌ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಸಣ್ಣ ಹಾಗೂ ಅತಿ ಸಣ್ಣ ಒಕ್ಕೂಟದ ಜಿಲ್ಲಾಧ್ಯಕ್ಷೆ ಭಾರತಿ ಟಂಕಸಾಲಿ ನೇತೃತ್ವದಲ್ಲಿ ನಾಗರ ಪ‍ಂಚಮಿ ಅಂಗವಾಗಿ ನಾಗರ ಕಲ್ಲಿಗೆ ಕ್ಷೀರಾಭಿಷೇಕ ಮಾಡಲಾಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ಭಾರತಿ ಟಂಕಸಾಲಿ, ಹಿಂದೂ ಧರ್ಮದಲ್ಲಿ ನಾಗರ ಪಂಚಮಿಗೆ ವಿಶೇಷ ಮಹತ್ವವಿದೆ.  ನಾಗಪ್ಪನಿಗೆ ಹಾಲು ಎರೆಯುವುದರಿಂದ ಪ್ರತಿಯೊಬ್ಬ ಭಕ್ತರ ಕಷ್ಟಕಾರ್ಪಣ್ಯಗಳು ದೂರವಾಗುತ್ತವೆ ಎಂಬ ನಂಬಿಕೆ ಇದೆ ಎಂದರು.

ಕೋವಿಡ್‌ ಆತಂಕದ ನಡುವೆಯೂ ಮಹಿಳೆಯರು ಸಾಂಪ್ರದಾಯಿಕವಾಗಿ ನಾಗರ ಪಂಚಮಿಯನ್ನು ಆಚರಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು