ನಾಲತವಾಡ: ಪಟ್ಟಣದಲ್ಲಿ ಮೋಸ, ವಂಚನೆ, ರಸ್ತೆ ಅಪಘಾತ, ಕಳ್ಳತನ ತಡೆಗೆ ಈ ಹಿಂದಿನಂತೆ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಆಗ್ರಹಿಸಿ ಯುವಜನ ಸೇನೆ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ವಾಲಿ ನೇತೃತ್ವದಲ್ಲಿ ಮುದ್ದೇಬಿಹಾಳ ಪಿಎಸ್ಐ ಸಂಜಯ ತಿಪರೆಡ್ಡಿ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

ಈ ಹಿಂದೆ ಪೊಲೀಸ್ ಇಲಾಖೆ, ಸಾರ್ವಜನಿಕರು ಹಾಗೂ ವ್ಯಾಪಾರಸ್ಥರ ಸಹಕಾರದೊಂದಿಗೆ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಆದರೆ ಕಳೆದ ವರ್ಷ ದುರಸ್ತಿಗಾಗಿ ತೆರವುಗೊಳಿಸಲಾದ ಈ ಕ್ಯಾಮೆರಾಗಳು ಇಂದಿಗೂ ಮರು ಅಳವಡಿಕೆಯಾಗದೇ ಇರುವುದರಿಂದ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಅವರು ಹೇಳಿದ್ದಾರೆ.

ನಾಲತವಾಡ ಪಟ್ಟಣವು ವಾಣಿಜ್ಯ, ಶಿಕ್ಷಣ ಹಾಗೂ ವ್ಯಾಪಾರ ಚಟುವಟಿಕೆಗಳ ಪ್ರಮುಖ ಕೇಂದ್ರವಾಗಿದ್ದು, ಸುತ್ತಮುತ್ತಲ ಜಿಲ್ಲೆಗಳಾದ ಯಾದಗಿರಿ, ರಾಯಚೂರು, ಬಾಗಲಕೋಟೆ ಸೇರಿದಂತೆ ವಿವಿಧ ಭಾಗಗಳಿಂದ ಜನರು ವ್ಯಾಪಾರ ಶಿಕ್ಷಣ ಹಾಗೂ ಇತರೆ ಅಗತ್ಯಗಳಿಗಾಗಿ ಇಲ್ಲಿಗೆ ಆಗಮಿಸುತ್ತಾರೆ. ವಿಶೇಷವಾಗಿ ಸೋಮವಾರ ಸಂತೆ ದಿನ ಹೆಚ್ಚು ಜನಸಂದಣಿ ಇರುತ್ತದೆ. ಈ ವೇಳೆ ಕಳ್ಳತನ ನಡೆಯುತ್ತಿವೆ. ಇದನ್ನು ತಡೆಯಲು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ಅವರು ಮನವಿಯಲ್ಲಿ ಕೋರಿದ್ದಾರೆ.

ಶಿವಾನಂದ ವಾಲಿ, ರಫೀಕ್ ತೆಗ್ಗಿನಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-26-1564179574

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.