ನಾಲತವಾಡ: ‘ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಕೃಷ್ಣಾ ನದಿ ತೀರದ ಜಾಕ್ವೆಲ್ಗೆ ಒದಗಿಸಲಾದ ನಿರಂತರ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ’ ಎಂದು ನವ ಕರ್ನಾಟಕ ರಾಜ್ಯ ಭ್ರಷ್ಟಾಚಾರ ನಿರ್ಮೂಲನಾ ವೇದಿಕೆಯ ಪದಾಧಿಕಾರಿಗಳು ಆರೋಪಿಸಿದ್ದಾರೆ.

‘ಕುಡಿಯುವ ನೀರಿಗಾಗಿ ಸರ್ಕಾರ ನಿರಂತರ ವಿದ್ಯುತ್ ಸರಬರಾಜು ಮಾಡಿದೆ. ಈ ಮಾರ್ಗದಲ್ಲಿ ಬರುವ ನಾಲ್ಕಾರು ಹಳ್ಳಿಗಳಿಗೆ ಹಾಗೂ ಕೆಲ ರೈತರಿಗೆ ಹೆಸ್ಕಾಂ ಅಧಿಕಾರಿಗಳು ಅಕ್ರಮವಾಗಿ ಸಂಪರ್ಕ ಒದಗಿಸಿದ್ದಾರೆ. ದುಡ್ಡು ಕೊಟ್ಟವರಿಗೆ ಅಕ್ರಮವಾಗಿ ಸಂಪರ್ಕ ಕಲ್ಪಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ನಾಲತವಾಡ ಉಪ ತಹಶೀಲ್ದಾರ್ಗೆ ಮನವಿ ಸಲ್ಲಿಸಿದ್ದಾರೆ.

‘ನೀರಿನ ಘಟಕಕ್ಕಾಗಿ ಎಂದೇ ಪ್ರತ್ಯೇಕವಾಗಿ ವಿದ್ಯುತ್ ಸರಬರಾಜು ಇದ್ದು, ಸುಮಾರು 20 ವರ್ಷಗಳಿಂದ ಪಟ್ಟಣ ಪಂಚಾಯಿತಿಯವರೇ ಅದರ ಶುಲ್ಕ ಸಂದಾಯ ಮಾಡುತ್ತಿದ್ದಾರೆ. ಹಲವು ವರ್ಷಗಳಿಂದ ಹೆಸ್ಕಾಂ ಅಧಿಕಾರಿಗಳು ಬೇಕೆಂದವರಿಗೆ ಹಣ ಪಡೆದು ವಿದ್ಯುತ್ ಸಂಪರ್ಕ ಒದಗಿಸಿದ್ದಾರೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಆಗಬಾರದು ಎಂದು ಸರ್ಕಾರ ಆದೇಶ ಹೊರಡಿಸಿದ್ದರೂ, ಅದನ್ನು ಲೆಕ್ಕಿಸದೆ ಅಧಿಕಾರಿಗಳು ಸಂಪರ್ಕ ಒದಗಿಸಿದ್ದಾರೆ’ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಅಧ್ಯಕ್ಷ ಎಂ.ಎನ್.ಕುಳಗೇರಿ, ಎಚ್.ಬಿ. ಮಾದರ, ಮಹಾಂತೇಶ ಸ್ಥಾವರಮಠ, ಭೀಮಣ್ಣ ಲೊಟಗೇರಿ, ಮೈಬು, ಸಂಗಪ್ಪ ಚಲವಾದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-26-675278734

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.